ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ, ಏನದು 

ಬೆಂಗಳೂರು |  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅಧಿಕಾರಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಇನ್ಮುಂದೆ ರಾಜ್ಯದ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳು ಮಾಡುವ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಪಾಲಿಕೆ ಎದುರು ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ! ಕರ್ನಾಟಕ ಬಚಾವೋ ಘೋಷಣೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಈ ಕುರಿತು ಪತ್ರ ಬರೆದು ಸರ್ಕಾರದ ಗಮನ ಸೆಳೆದಿದ್ದರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಕುರಿತು ಶಾಸಕರು ಅಥವಾ ಸಂಸದರಿಗೆ ಮನವಿ ಮಾಡಿದಾಗ, ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡುವುದು ಸಾಮಾನ್ಯ. ಆದರೆ, ಅನೇಕ ಸಂದರ್ಭಗಳಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಕರೆಗಳನ್ನು ಸ್ವೀಕರಿಸುತ್ತಿಲ್ಲ ಮತ್ತು ಒಂದು ವೇಳೆ ಕೆಲಸದ ಒತ್ತಡದಲ್ಲಿದ್ದರೂ ನಂತರ ಮರುಕರೆ ಮಾಡುವ ಸೌಜನ್ಯ ತೋರುತ್ತಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಿಎಸ್ ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಆದೇಶದ ಅನ್ವಯ, ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು, ಪರಿಷತ್ತಿನ ಸದಸ್ಯರು ಹಾಗೂ ಸಂಸದರ ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಳ್ಳಬೇಕು. ಒಂದು ವೇಳೆ ಕರ್ತವ್ಯನಿರತರಾಗಿದ್ದ ಕಾರಣ ಕರೆ ಸ್ವೀಕರಿಸಲು ಸಾಧ್ಯವಾಗದಿದ್ದರೆ, ಕೆಲಸ ಮುಗಿದ ತಕ್ಷಣವೇ ಸೌಜನ್ಯಕ್ಕಾದರೂ ಮರು ಕರೆ ಮಾಡಿ ಮಾತನಾಡಬೇಕು. ಜನಪ್ರತಿನಿಧಿಗಳ ಮೂಲಕ ಬರುವ ಜನಪರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಸ್ಪಂದಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Callback Order for Karnataka Govt Officers
Callback Order for Karnataka Govt Officers

Callback Order for Karnataka Govt Officers

shivamogga car decor sun control house
shivamogga car decor sun control house