canara bank : ಕಳ್ಳರು ವಾಮಾಚಾರ ಮಾಡಿ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ರಾಷ್ಟ್ರೀಕೃತ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ.
canara bank : ಹೇಗಾಯ್ತು ಘಟನೆ
ಮೇ 27 ರ ರಾತ್ರಿ ಕಳ್ಳರು ರಾಷ್ಟ್ರೀಕೃತ ಕೆನರಾ ಬ್ಯಾಂಕ್ನಲ್ಲಿ ಕಳ್ಳತನ ಮಾಡಲು ಸ್ಕೆಚ್ ಹಾಕಿದ್ದಾರೆ. ಹಾಗೆಯೇ ಮೊದಲು ಬ್ಯಾಂಕ್ನ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ವಾಮಾಚಾರ ನಡೆಸಿದ್ದಾರೆ. ನಂತರ ಚಿನ್ನಾಭರಣ ನಗದು ಹಾಗೂ ಬ್ಯಾಂಕ್ನಲ್ಲಿದ್ದ ಸಿಸಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ಗಳನ್ನು ಕದ್ದು ಪರಾರಿಯಾಗಿದ್ದಾರೆ. ಇನ್ನೂ ಬ್ಯಾಂಕ್ನಲ್ಲಿ ಎಷ್ಟು ನಗದು ಹಾಗೂ ಚಿನ್ನಾಭರಣಗಳು ಕಳುವು ಆಗಿದೆ ಎಂಬ ಅಂಕಿ ಅಂಶಗಳು ಇನ್ನಷ್ಟೇ ತಿಳಿದುಬರಬೇಕಿದೆ.
ಈ ಹಿನ್ನಲೆ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು, ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಮನಗೂಳಿ ಪಟ್ಟಣ ಪಂಚಾಯತಿಯಿಂದ ಪ್ರಮುಖ ಭಾಗಗಳಲ್ಲಿ 35 ಸಿಸಿ ಕ್ಯಾಮೆರಾಮಗಳನ್ನು ಅಳವಡಿಕೆ ಮಾಡಲಾಗಿದ್ದು, ತನಿಖಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಿದ್ದಾರೆ.
