SHIVAMOGGA NEWS TODAY

car accident in shivamogga : ಜೂನ್​ 15 ರಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆ ಸಾವು

Prathapa thirthahalli ನವೀಕರಣ: 20 ಜೂನ್ 2025, 3:45 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಜೂನ್​ 15 ರಂದು ಕಾರು ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವವೈದ್ಯ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಆರ್​​ ಎಂ ಎಲ್​ ನಗರದ  ಸನಾ ರಾಬಿಯಾ ಕೌಸರ್​ (22) ಮೃತ ದುರ್ದೈವಿ.

car accident in shivamogga :  ಏನಿದು ಘಟನೆ.

ಎಂಬಿಬಿಎಸ್​ ಪದವಿ ಮುಸಿಗಿ ಸಿಮ್ಸ್​ ಮೆಡಿಕಲ್​ ಕಾಲೇಜಿನಲ್ಲಿ ಇಂಟರ್​​ಶಿಪ್​ ಮಾಡುತ್ತಿದ್ದ  ಸನಾ ರಾಬಿಯಾ ಕೌಸರ್ ಜೂನ್​ 15 ರಂದು ಗೆಳೆಯರೊಂದಿಗೆ ಹೊಸನಗರಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಆ ವೇಳೆ ಶಿವಮೊಗ್ಗದ  ತ್ಯಾವರೆಕೊಪ್ಪ  ಹುಲಿ ಸಿಂಹ ಧಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ  ಸನಾ ರಾಬಿಯಾ ಕೌಸರ್​ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗೆಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ವೈದ್ಯೆ ಸಾವನ್ನಪ್ಪಿದ್ದಾರೆ.

car accident in shivamogga ಘಟನಾ ಸಂಬಂಧ ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

 

View this post on Instagram

 

A post shared by KA on line (@kaonlinekannada)

 

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.