ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಬೈಕ್‌ಗೆ ಹಿಂದಿನಿಂದ ಕಾರು ಡಿಕ್ಕಿ | ಯುವತಿ ಸಾವು

car accident in the Sagar taluk of Shivamogga district, Karnataka, resulted in the death of a student. 

ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಬೈಕ್‌ಗೆ ಹಿಂದಿನಿಂದ ಕಾರು ಡಿಕ್ಕಿ | ಯುವತಿ ಸಾವು
Sagar taluk , Shivamogga district Karnataka

SHIVAMOGGA | MALENADUTODAY NEWS | Jun 23, 2024  ಮಲೆನಾಡು ಟುಡೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಕಾರು ಅಪಘಾತವೊಂದು ವಿದ್ಯಾರ್ಥಿನಿಯ ಸಾವಿಗೆ ಕಾರಣವಾಗಿದೆ. ನಿನ್ನೆ ಮಧ್ಯಾಹ್ನ ನಡೆದ ಘಟನೆ ಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. 

ಘಟನೆ ವಿವರ ನೋಡುವುದಾದರೆ, ಸಾಗರ ಕುಗ್ವೆ ಬಳಿ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿ ದ್ವಿಚಕ್ರವಾಹನದಲ್ಲಿ ತನ್ನ ಸ್ನೇಹಿತೆ ಜೊತೆಯಲ್ಲಿ ಮನೆಗೆ ಹೋಗುತ್ತಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಜೋಗದ ಕಡೆಗೆ ಹೊರಟಿದ್ದ ಕಾರೊಂದು ಸ್ಪೀಡಾಗಿ ಬಂದು ದ್ವಿಚಕ್ರವಾಹನಕ್ಕೆ ಡಿಕ್ಕಿಹೊಡೆದಿದೆ. 

ಪರಿಣಾಮ ಕೆಳಕ್ಕೆ ಬಿದ್ದ ಅನುಷಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದೀಗ ಆಕೆಯು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಮೃತ ವಿದ್ಯಾರ್ಥಿನಿಯ ತಂದೆ ಕುಂದಾಪುರದವರಾಗಿದ್ದು ಸಾಗರ ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. 

A car accident in the Sagar taluk of Shivamogga district, Karnataka, resulted in the death of a student.