Car and bus accident ಆನಂದಪುರ ಬಳಿ ಭೀಕರ ಅಪಘಾತ: ಇಬ್ಬರಿಗೆ ಗಾಯ
ಆನಂದಪುರ ಸಮೀಪದ ಮುಂಬಾಳುವಿನ ಕೆರೆ ಏರಿಯಾ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ಗೆ, ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಕಾರು ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಮತ್ತು ಭರತ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಆನಂದಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


