SHIVAMOGGA Feb 27, 2024 ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾದ ಘಟನೆ ನಿನ್ನೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಘಟನೆಯಲ್ಲಿ ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾನೆ ಈ ಅಪಘಾತದಲ್ಲಿ ಮತ್ತೊಬ್ಬ ಸವಾರ ಪ್ರತಾಪ್ (26) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಗರದ ಆನಂದಪುರದ ಗೌತಮಪುರ ಬಳಿ ಘಟನೆ ನಡೆದಿದ್ದು, ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಆನಂದಪುರದಿಂದ ಶಿಕಾರಿಪುರ ಕಡೆಗೆ ಕಾರು ಹೋಗುತ್ತಿತ್ತು. ಇದೇ ವೇಳೆ ಅತ್ತ ಶಿಕಾರಿಪುರದಿಂದ ಆನಂದಪುರದೆಡೆಗೆ ಹೋರಿಹಬ್ಬ ಮುಗಿಸಿಕೊಂಡು ಬೈಕ್ನಲ್ಲಿ ಇಬ್ಬರು ಬರುತ್ತಿದ್ದರು. ಈ ವೇಳೆ ಅಪಘಾತವಾಗಿದೆ. ಬೈಕ್ ಸವಾರರಿಬ್ಬರು
ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ.
