ಕಾರು-ಬಸ್ ಮುಖಾಮುಖಿ ಡಿಕ್ಕಿ, ವೃದ್ಧನಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
Car Bus Head on Collision Near Shivamogga
Car Bus Head on Collision Near Shivamogga

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ವೀರಗಾರನ ಬೈರನಕೊಪ್ಪದಲ್ಲಿ ಬಳಿ ಬಸ್ ಮತ್ತು ಸ್ಯಾಂಟ್ರೋ ಕಾರುಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ವೃದ್ಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ವ ಆಚೀಚೆಯಾದ ರೇಟು! ಶಿವಮೊಗ್ಗ,ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ ಎಷ್ಟಿದೆ ಗೊತ್ತಾ ಅಡಿಕೆ ದರ

ಶಿವಮೊಗ್ಗದಿಂದ ಆಯನೂರು  ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬರುತ್ತಿದ್ದ ಸ್ಯಾಂಟ್ರೋ ಕಾರುಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ ವೃದ್ಧರಿಗೇ ಅಪಘಾತದಿಂದಾಗಿ ತೀವ್ರ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ವೃದ್ಧರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Car Bus Head on Collision Near Shivamogga
Car Bus Head on Collision Near Shivamogga

ಈ ಅಪಘಾತ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಡಿಕ್ಕಿಯಾದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Car Bus Head on Collision Near Shivamogga

Car Bus Head on Collision Near Shivamogga
Car Bus Head on Collision Near Shivamogga
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor