ಭದ್ರಾವತಿ ಬೈಪಾಸ್‌ನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ನಾಲ್ವರಿಗೆ ಗಾಯ

prathapa thirthahalli
Prathapa thirthahalli - content producer

 ಭದ್ರಾವತಿ: ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಉಜ್ಜನೀಪುರದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆದಿದ್ದಾರೆ.

- Advertisement -

ಘಟನೆಯಲ್ಲಿ ವಿದ್ಯುತ್ ಕಂಬ ಹಾಗೂ ಕಾರು ಎರಡೂ ಹಾನಿಗೊಳಗಾಗಿವೆ.ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Car hits Electric Pole  Bhadravati

Car hits Electric Pole

 

Share This Article