ಭದ್ರಾವತಿ: ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಉಜ್ಜನೀಪುರದಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆದಿದ್ದಾರೆ.
ಘಟನೆಯಲ್ಲಿ ವಿದ್ಯುತ್ ಕಂಬ ಹಾಗೂ ಕಾರು ಎರಡೂ ಹಾನಿಗೊಳಗಾಗಿವೆ.ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Car hits Electric Pole Bhadravati


