ದುರ್ಗಿಗುಡಿ ಚೌಡೇಶ್ವರಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಮೊಬೈಲ್ ಎಫೆಕ್ಟ್​!?

ಹಂಚಿಕೊಳ್ಳಿ
WhatsApp Facebook X Telegram
ದುರ್ಗಿಗುಡಿ ಚೌಡೇಶ್ವರಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ Car Overturns Near Chowdeshwari Temple in Shivamogga, Driver Safe

ಶಿವಮೊಗ್ಗ / ಡ್ರೈವಿಂಗ್ ಮಾಡುತ್ತಿರುವಾಗ ಮೊಬೈಲ್ ಯೂಸ್ ಮಾಡಿದರೆ ಏನಾಗುತ್ತದೆ ಎಂಬುದಕ್ಕೆ ಉದಾಹರಣೆಯಂತಹ ಘಟನೆಯೊಂದು ಶಿವಮೊಗ್ಗದ ಎರಿಯಾ ಒಂದರ ಬಳಿ ನಡೆದಿದೆ. ಮೊಬೈಲ್​ನಲ್ಲಿ ಮಾತನಾಡ್ತಾ ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಏನೂ ಸಹ ಆಗಿಲ್ಲ.

ದುರ್ಗಿಗುಡಿ ಚೌಡೇಶ್ವರಿ ದೇವಸ್ಥಾನದ ಬಳಿ ಘಟನೆ

ಇಲ್ಲಿನ ಚೌಡೇಶ್ವರಿ ದೇವಸ್ಥಾನದ ಸಮೀಪ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಹೇಳಿರುವ ಪ್ರಕಾರ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಕಾರು ಕಂಟ್ರೋಲ್​ ತಪ್ಪಿ ನೇರವಾಗಿ ರಸ್ತೆ ಬದಿಯಲ್ಲಿದ್ದ ದೇವಸ್ಥಾನದ ಕಟ್ಟೆಗೆ ರಭಸವಾಗಿ ಗುದ್ದಿದೆ. ಬಳಿಕ ಪಲ್ಟಿಯಾಗಿದೆ.

ಕಾರು ಪಲ್ಟಿಯಾದ ದೃಶ್ಯವನ್ನು ಗಮನಿಸಿದ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ರಸ್ತೆಯಲ್ಲಿ ಉರುಳಿಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದ ಸಾರ್ವಜನಿಕರು, ಒಳಗಿದ್ದ ಚಾಲಕನಿಗೆ ರಕ್ಷಣೆ ನೀಡಿದ್ದಾರೆ. ಅಂದಹಾಗೆ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.

ದುರ್ಗಿಗುಡಿ ಚೌಡೇಶ್ವರಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ Car Overturns Near Chowdeshwari Temple in Shivamogga, Driver Safe
ದುರ್ಗಿಗುಡಿ ಚೌಡೇಶ್ವರಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ Car Overturns Near Chowdeshwari Temple in Shivamogga, Driver Safe
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor