KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.
ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ನಡೆದಿದ್ದೇನು?
ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು ನಿಧಿಶೋಧ ನಡೆಸಿದ್ದರು. ಈ ಸಂಬಂಧ ಗ್ರಾಮ ಸುಧಾರಣೆ ಸಮಿತಿ ಪ್ರಮುಖರು ಆನಂದಪುರಂ ಪೊಲೀಸ್ ಸ್ಟೇಷನ್ಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು, ಕೇಶವ, ಸಾಜು, ಅಂತೋನಿ, ಜನಾರ್ಧನ, ಸೋಮಶೇಖರ ಎಂಬುವವರ ವಿರುದ್ಧ ಕೇಸ್ ದಾಖಲಿಸಿ , ಈ ಪೈಕಿ ಕೇಶವ, ಅಂತೋನಿಯನ್ನು ಬಂಧಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?