ಭದ್ರಾವತಿ: ಜಾತಿ ನಿಂದನೆ ಪ್ರಕರಣದ 6 ಆರೋಪಿಗಳಿಗೆ ಭಾರಿ ದಂಡದೊಂದಿಗೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ…?

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Caste Abuse ಶಿವಮೊಗ್ಗ: ದಲಿತ ವ್ಯಕ್ತಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ,ಭದ್ರಾವತಿಯ ಆರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಆರೋಪಿಗಳಿಗೆ ತಲಾ 2 ವರ್ಷಗಳ ಕಠಿಣ ಕಾರಾವಾಸದ ಶಿಕ್ಷೆ ಹಾಗೂ ಒಟ್ಟು 1,74,000 ರೂಪಾಯಿಗಳ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ.

ಜೀವನವೇ ಬೇಡವೆಂದವರಿಗೆ ಬದುಕುವ ಭರವಸೆ ನೀಡಿದ 112 ಸಿಬ್ಬಂದಿ: ಇದು ಮಾನವೀಯತೆಯ ಕಥೆ

ಕಳೆದ 2020ರ ಜುಲೈ 28ರಂದು ಭದ್ರಾವತಿಯ ಲಕ್ಷ್ಮೀಪುರ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗೌತಮಿ (30), ನಾಗರಾಜ (56), ರಾಘವೇಂದ್ರ (35), ನಾಗರತ್ನ (54), ಲಕ್ಷ್ಮಮ್ಮ (40) ಮತ್ತು ದೇವರಾಜ (28) ಎಂಬುವವರು ಹಲ್ಲೆ ನಡೆಸಿದ್ದರು. ಆರೋಪಿಗಳು ಗುಂಪು ಕಟ್ಟಿಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಜಾತಿ ಹೀಯಾಳಿಸಿ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಅಂದಿನ ಡಿವೈಎಸ್‌ಪಿ ಸುಧಾಕರ್ ಎಸ್. ನಾಯ್ಕ್ ಅವರು ಕೈಗೊಂಡು, ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಸಲ್ಲಿಸಿದ್ದರು. 

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು, ಆರೋಪಿಗಳ ಮೇಲಿನ ದೋಷ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ.

Caste Abuse 6 Sentenced to 2 Years Prison

Caste Abuse  Bee Attack Shivamogga Sharavathi Project Sagara PoliceShimoga Court Shivamogga Careers Ripponpete Shivamogga Unknown Body Found Near Tuppur Hybrid Vegetable Seeds Shikaripura Laborer Dies Shivamogga Court Bhadravati Court Unidentified Man Soraba Ghana Detains Bhadravathi Arson Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Caste Abuse
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor