ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ಈ ರೀತಿ ಆಗಿದ್ದು ಇದೇ ಮೊದಲು. ಈ ಕೇಸ್​ನ್ನು ಸಿಬಿಐಗೆ ವಹಿಸಬೇಕು, ಶಾರದಾ ಪೂರ್ಯನಾಯ್ಕ್​​​

ಹಂಚಿಕೊಳ್ಳಿ
WhatsApp Facebook X Telegram
CBI Probe Demanded Into Sting Operation Controversy
CBI Probe Demanded Into Sting Operation Controversy

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಈ ಹಿಂದೆ ಹಾಲಿನಲ್ಲಿ ಮತ್ತು ಬೆಣ್ಣೆಯಲ್ಲಿ ಕಲಬೆರಕೆಯಾದಾಗ ಸ್ಟಿಂಗ್ ಆಪರೇಶನ್ ಬಗ್ಗೆ ಕೇಳುತ್ತಿದ್ದೆವು. ಆದರೆ, ಬದಲಾದ ಕಾಲಮಾನದಲ್ಲಿ ಇದನ್ನು ರಾಜಕೀಯದಲ್ಲಿ ಅಧಿಕಾರದ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದರಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯನಾಯ್ಕ್ ಆಗ್ರಹಿಸಿದರು.

ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಬಗ್ಗೆ ಈ ಹಿಂದೆಯಿಂದಲೂ ಕೆಲವರು ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಾ ಬರುತ್ತಿದ್ದು, ಈಗ ಸ್ಟಿಂಗ್ ಆಪರೇಷನ್ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಯಾರೂ ಸಹ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಾಗರಿಕ ಸಮಾಜ ತಲೆತಗ್ಗಿಸುವ ರೀತಿಯಲ್ಲಿ ಕೀಳುಮಟ್ಟದಲ್ಲಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ. ಈ ಹಿಂದೆಲ್ಲ ಹಾಲಿನಲ್ಲಿ ಮತ್ತು ಬೆಣ್ಣೆಯಲ್ಲಿ ಕಲಬೆರಕೆಯಾದಾಗ ಮಾಧ್ಯಮದವರು ಸ್ಟಿಂಗ್ ಆಪರೇಷನ್ ನಡೆಸಿ ಪತ್ತೆ ಹಚ್ಚುವುದನ್ನು ನೋಡುತ್ತಿದ್ದೆವು. ಆದರೆ, ಇದೀಗ ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದರಿಂದ ಮಹಿಳೆಯರು ಹಾಗೂ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ” ಎಂದರು.

ಕೆಲವರು ಅಧಿಕಾರದ ಆಸೆಗಾಗಿ ಈ ಮಟ್ಟಕ್ಕೂ ಹೋಗುತ್ತಾರೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಸ್ಟಿಂಗ್ ಆಪರೇಷನ್ ಬಗ್ಗೆ ಕೇಳುತ್ತಿದ್ದೆವು, ಆದರೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಾಗಿದೆ. ಯಾರು ಸಹ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ, ಹೀಗೂ ಆಗುತ್ತಾ ಎಂದು ಯೋಚಿಸುತ್ತಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇದಕ್ಕೆ ಸೂತ್ರಧಾರರು ಯಾರೆಂಬುದು ಹೊರಬರಬೇಕು. ಈಗಾಗಲೇ ಇದನ್ನು ನಾವೇ ಮಾಡಿದ್ದು ಎಂದು ಅನೇಕರು ಒಪ್ಪಿಕೊಂಡಿದ್ದಾರೆ, ಒಪ್ಪಿಕೊಂಡವರನ್ನು ಯಾಕೆ ಬಂಧಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor