Cc camera : ಶಿವಮೊಗ್ಗ: ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆ ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಹೆಚ್ಚಿಸಲು ಶಿವಮೊಗ್ಗ ನಗರದ ಪ್ರಮುಖ ಸ್ಥಳಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ 1000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಪೊಲೀಸ್ ಇಲಾಖೆಯು ನೀಡಿರುವ ಮಅಹಿತಿ ಪ್ರಕಾರ, ನಗರದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ಯಾವುದೇ ಅಹಿತಕರ ಘಟನೆ ನಡೆದರೆ ಅದನ್ನು ಕೂಡಲೇ ಪತ್ತೆಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಕ್ಯಾಮೆರಾಗಳು ಹೆಚ್ಚು ದೂರದವರೆಗೆ ಸ್ಪಷ್ಟವಾದ ದೃಶ್ಯಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿದ್ದು, ಸಣ್ಣಪುಟ್ಟ ಚಲನವಲನಗಳನ್ನು ಸಹ ರೆಕಾರ್ಡ್ ಮಾಡುತ್ತವೆ.
ಕ್ಯಾಮೆರಾಗಳು ಮೈಕ್-ಎನೇಬಲ್ಡ್ ವೈಶಿಷ್ಟ್ಯವನ್ನು ಹೊಂದಿದ್ದು, ಇದರಿಂದ ಪೊಲೀಸ್ ಅಧಿಕಾರಿಗಳು ಅಗತ್ಯ ಸೂಚನೆಗಳನ್ನು ಸಾರ್ವಜನಿಕರಿಗೆ ನೀಡಲು ಸಾಧ್ಯವಾಗುತ್ತದೆ. ಇವುಗಳ ದೃಶ್ಯಾವಳಿಗಳನ್ನು ಲೈವ್ ಸ್ಟ್ರೀಮಿಂಗ್ ಮೂಲಕ ಪೊಲೀಸ್ ಇಲಾಖೆಯು ನೇರವಾಗಿ ವೀಕ್ಷಿಸಲಿದೆ.
ಈ ಸಿಸಿಟಿವಿ ದೃಶ್ಯಾವಳಿಗಳನ್ನು ಆಯಾ ಪೊಲೀಸ್ ಠಾಣೆಗಳ ಅಧಿಕಾರಿಗಳು, ಬೀಟ್ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಾರೆ.
Cc camera

1 thought on “ಈದ್ ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬ : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಅಳವಡಿಸಿದ ಸಿಸಿ ಕ್ಯಾಮರಾಗಳೆಷ್ಟು ಗೊತ್ತಾ”