Central Govt Order ಶಿವಮೊಗ್ಗ : ನವದೆಹಲಿ : ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಖರೀದಿ ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸೋಯಾಬಿನ್, ಶೇಂಗಾ, ಹೆಸರು ಕಾಳು, ಉದ್ದಿನ ಕಾಳು ಹಾಗೂ ಸೂರ್ಯಕಾಂತಿ ಬೆಳೆಗಳನ್ನು ಖರೀದಿಸುವ ಕಾಲಮಿತಿಯನ್ನು ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರವು ಡಿಸೆಂಬರ್ 18 2025 ರಂದು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪುರಸ್ಕರಿಸಿರುವ ಕೇಂದ್ರ ಸರ್ಕಾರ ಈ ಕುರಿತು ನಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳಿಗೆ ಅಧಿಕೃತ ಸೂಚನೆ ನೀಡಿದೆ.

- ಹೊಸ ಆದೇಶದ ಅನ್ವಯ ಸೋಯಾಬಿನ್ ಮತ್ತು ಶೇಂಗಾ ಬೆಳೆಗಳ ಖರೀದಿ ಪ್ರಕ್ರಿಯೆಯು ಜನವರಿ 26 2026 ರವರೆಗೆ ಮುಂದುವರಿಯಲಿದೆ.
- ಅದೇ ರೀತಿ ಹೆಸರು ಕಾಳು, ಉದ್ದಿನ ಕಾಳು ಮತ್ತು ಸೂರ್ಯಕಾಂತಿ ಬೆಳೆಗಳನ್ನು ಖರೀದಿಸಲು ಜನವರಿ 22 2026 ರವರೆಗೆ ಕಾಲಾವಕಾಶ ನೀಡಲಾಗಿದೆ.
- ಈ ಹಿಂದೆ ಸೆಪ್ಟೆಂಬರ್ 20 2025 ರಂದು ಹೊರಡಿಸಲಾಗಿದ್ದ ಮಂಜೂರಾತಿ ಪತ್ರದ ಮುಂದುವರಿದ ಭಾಗವಾಗಿ ಈ ವಿಸ್ತರಣೆ ಮಾಡಲಾಗಿದ್ದು ಕೇವಲ ಮುಂಚಿತವಾಗಿ ನೋಂದಾಯಿಸಿಕೊಂಡಿರುವ ರೈತರಿಂದ ಮಾತ್ರ ಈ ಬೆಳೆಗಳನ್ನು ಖರೀದಿಸಲು ಅವಕಾಶವಿರುತ್ತದೆ.
- ಉಳಿದಂತೆ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದ ಇತರೆಲ್ಲಾ ನಿಯಮಗಳು ಮತ್ತು ನಿಬಂಧನೆಗಳು ಈ ಹಿಂದಿನಂತೆಯೇ ಮುಂದುವರಿಯಲಿವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪ ಆಯುಕ್ತರಾದ ಬಿನೋದ್ ಗಿರಿ ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಿ ಅವಧಿ ವಿಸ್ತರಣೆ ಕೇಂದ್ರ ಸರ್ಕಾರದ ಆದೇಶ Extension of Procurement Period for Soyabean and Groundnut in Karnataka: Central Govt Order
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
