ಲಿಂಗನಮಕ್ಕಿ ತಳದಲ್ಲಿ 8 ಸಾವಿರ ಕೋಟಿ ಪ್ರಾಜೆಕ್ಟ್‌ | ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ DPR ಗೆ ಕೇಂದ್ರ ಅನುಮೋದನೆ! ಏನಿದು?

Centre approves Sharavathi pumped storage project DPR What is this?

ಲಿಂಗನಮಕ್ಕಿ ತಳದಲ್ಲಿ  8 ಸಾವಿರ ಕೋಟಿ ಪ್ರಾಜೆಕ್ಟ್‌ | ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ DPR ಗೆ ಕೇಂದ್ರ ಅನುಮೋದನೆ! ಏನಿದು?
Sharavathi pumped storage project

SHIVAMOGGA | MALENADUTODAY NEWS |  Aug 2, 2024 

ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿ) ಅನುಷ್ಠಾನಗೊಳಿಸುತ್ತಿರುವ ₹8,005 ಕೋಟಿ ವೆಚ್ಚದ ‘ಶರಾವತಿ ಪಂಪ್ಡ್‌ ಸ್ಟೋರೇಜ್‌’ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌ಗೆ) ಕೇಂದ್ರ ವಿದ್ಯುತ್‌ ಪ್ರಾಧಿಕಾರ ನಿನ್ನೆ ಶುಕ್ರವಾರ ಅನುಮೋದನೆ ನೀಡಿದೆ. 

 ಶರಾವತಿ ಪಂಪ್ಡ್‌ ಸ್ಟೋರೇಜ್‌ 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ

2000 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಯೋಜನೆಗೆ ದಾಖಲೆ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ವಿದ್ಯುತ್‌ ಸಚಿವಾಲಯದ ಪ್ರಕಟಣೆ ತಿಳಿಸಿದೆ. 

ಏನಿದು ಯೋಜನೆ

ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲ್ಲಿದೆ. 



ಒಮ್ಮೆ ಹರಿದುಹೋಗಿ ವಿದ್ಯುತ್ ಉತ್ಪಾದನೆ ಮಾಡಿಕೊಂಡ ನೀರನ್ನೇ ಮತ್ತೆ ಮೇಲಕ್ಕೆ ಪಂಪ್ ಮಾಡಿ ಅದೇ ನೀರಿನಿಂದ ಎರಡನೇ ಬಾರಿ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಉದ್ದೇಶ

ಇದಕ್ಕೆ ಸ್ವಲ್ಪ ವಿದ್ಯುತ್ ವೆಚ್ಚವಾಗುತ್ತದೆಯೇ ಹೊರತು ಮತ್ತೇನೂ ಬೇಕಿಲ್ಲ. ಒಂದು ಹನಿ ನೀರನ್ನೇ ಹಲವಾರು ಬಾರಿ ಬಳಕೆ ಮಾಡಿ ವಿದ್ಯುತ್‌ ಉತ್ಪಾದನೆ ಮಾಡುವ ಯೋಜನೆ ಇದಾಗಿದೆ. 

ತಲಾ 250 ಮೆಗಾವಾಟ್‌ ಸಾಮರ್ಥ್ಯದ 8 ಜಲ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಒಟ್ಟು 2,000 ಮೆಗಾವಾಟ್‌ ವಿದ್ಯುತ್‌ ಉತ್ಪಾದಿಸುವ ಯೋಜನೆಗೆ ಇದೀಗ ಡಿಪಿಆರ್‌ಗೆ ಅನುಮತಿ ನೀಡಲಾಗಿದೆ. 

ಯೋಜನೆಯ ಇತಿಹಾಸ 

ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ₹ 4,862.89 ಕೋಟಿ ವೆಚ್ಚದ ‘ಶರಾವತಿ ಪಂಪ್ಡ್‌ ಸ್ಟೋರೇಜ್‌’ ಯೋಜನೆಯ ಪ್ರಸ್ತಾವವನ್ನು ಸಿದ್ಧ ಪಡಿಸಲಾಗಿತ್ತು. 

ಆನಂತರ 2019ರ ಸೆಪ್ಟೆಂಬರ್‌ ನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಈ ಯೋಜನೆಯ ಡಿಪಿಆರ್‌ಗೆ ಒಪ್ಪಿಗೆ ನೀಡಲಾಗಿತ್ತು.

ನಾಲ್ಕೂವರೆ ವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ಯೋಜನೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಪುನಃ ಚುರುಕು ಪಡೆದಿತ್ತು. 

ಇದೀಗ ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿ) ಅನುಷ್ಠಾನಗೊಳಿಸುತ್ತಿರುವ ₹8,005 ಕೋಟಿ ವೆಚ್ಚದ ‘ಶರಾವತಿ ಪಂಪ್ಡ್‌ ಸ್ಟೋರೇಜ್‌’ ಯೋಜನೆಯ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್‌ಗೆ) ಕೇಂದ್ರ ವಿದ್ಯುತ್‌ ಪ್ರಾಧಿಕಾರ ನಿನ್ನೆ ಶುಕ್ರವಾರ ಅನುಮೋದನೆ ನೀಡಿದೆ. 



ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ