ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ 28 ತಾಂತ್ರಿಕ ಹುದ್ದೆಗಳ ನೇಮಕಾತಿ! ಇಲ್ಲಿದೆ ಪೂರ್ತಿ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯವು (CFTRI) 28 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ 2 ಹುದ್ದೆಗಳನ್ನು ಮಾಜಿ ಸೈನಿಕರಿಗೆ ಮೀಸಲಿರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.

ಒಟ್ಟು 28 ತಾಂತ್ರಿಕ ಹುದ್ದೆಗಳಲ್ಲಿ ಫಿಟ್ಟರ್ ಹಾಗೂ ಎಲೆಕ್ಟ್ರಾನಿಕ್ಸ್ ಮೆಕಾನಿಕ್ ವಿದ್ಯಾರ್ಹತೆ ಹೊಂದಿರುವ ಮಾಜಿ ಸೈನಿಕರಿಗೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಹ ಮಾಜಿ ಸೈನಿಕರು ಈ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 18, 2026 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು https://cftri.res.in ಅಥವಾ https://recruitment.cftri.res.in ಜಾಲತಾಣಗಳ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ, ವಿದ್ಯಾರ್ಹತೆ ಹಾಗೂ ನೇಮಕಾತಿ ವಿವರಗಳನ್ನು ಸಂಸ್ಥೆಯ ಅಧಿಕೃತ ಜಾಲತಾಣದಲ್ಲಿ ಪಡೆಯಬಹುದು ಎಂದು ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor