SHIVAMOGGA NEWS TODAY

ಈ ಪ್ರದೇಶದಲ್ಲಿ ನಡೆಯುವ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ, ಡಿಸಿ ಆದೇಶ

Prathapa thirthahalli ನವೀಕರಣ: 19 ಫೆಬ್ರ 2026, 12:57 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Chandragutti Fair ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಂದ್ರಗುತ್ತಿಯಲ್ಲಿ ನಡೆಯಲಿರುವ ಶ್ರೀ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 24 ಮತ್ತು 25 ರಂದು ನಡೆಯಲಿರುವ ಈ ಜಾತ್ರೆಯಲ್ಲಿ ಸಾಂಪ್ರದಾಯಿಕ ಬೆತ್ತಲೆ ಸೇವೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಈ ಎರಡು ದಿನಗಳ ಕಾಲ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಅರ್ಪಿಸುವುದು, ಪಡ್ಲಿಗಿ ತುಂಬಿಸುವುದು ಹಾಗೂ ಪ್ರಮುಖವಾಗಿ ಬೆತ್ತಲೆ ಸೇವೆ’ ನೀಡುವುದನ್ನು ಕಟ್ಟುನಿಟ್ಟಾಗಿ ತಡೆಯಲಾಗಿದೆ. ಸಾರ್ವಜನಿಕ ನೈತಿಕತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆದರೆ, ಈ ನಿಷೇಧಾಜ್ಞೆಯು ದೇವಸ್ಥಾನದ ಮೂಲ ಧಾರ್ಮಿಕ ವಿಧಿವಿಧಾನಗಳಿಗೆ ಅನ್ವಯಿಸುವುದಿಲ್ಲ. ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕೈಂಕರ್ಯಗಳು ಮತ್ತು ಇತರ ಸಂಪ್ರದಾಯಬದ್ಧ ಧಾರ್ಮಿಕ ಆಚರಣೆಗಳನ್ನು ಎಂದಿನಂತೆ ನಡೆಸಲು ಯಾವುದೇ ಅಡ್ಡಿಯಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಭಕ್ತಾದಿಗಳು ಶಾಂತಿಯುತವಾಗಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. 

Chandragutti Fair DC Bans Naked Worship

Chandragutti Fair Anandapura Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
Chandragutti Fair
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.