ಮಲೆನಾಡು ಟುಡೆ ಸುದ್ದಿ / ಸೊರಬ / ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ಕಲ್ಯಾಣ ಮಂಟಪದ ಆವರಣದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ 11ನೇ ವರ್ಷದ ಶ್ರೀರೇಣುಕಾಂಬ ದೇವಿ ದಸರಾ ಉತ್ಸವ ಆಚರಿಸಲಾಗುವುದು. ಉತ್ಸವದ ಅಂಗವಾಗಿ ಪ್ರತಿದಿನ ಸಂಜೆ 6.30ಕ್ಕೆ ಯಕ್ಷಗಾನ, ಭರತನಾಟ್ಯ, ಸಂಗೀತ, ನಾಟಕ, ಬಯಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಅಂತಾ ದಸರಾ ಉತ್ಸವ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ತಿಳಿಸಿದ್ದಾರೆ
ಈ ಸಂಬಂಧ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಚಂದ್ರಗುತ್ತಿ ರೇಣುಕಾಂಬಾ ದಸರಾ ಉತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಅಕ್ಟೋಬರ್ 11ರಂದು ಸಂಜೆ 6.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ದಸರಾ ಉತ್ಸವ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ಎಚ್. ಗಣಪತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಪಿ. ರತ್ನಾಕರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರೇಣುಕಾಂಬ ದೇವಿ ದಸರಾ ಕಾರ್ಯಕ್ರಮಗಳ ವಿವರ
- ಉತ್ಸವದ ಮೊದಲ ದಿನ ರೇಣುಕಾ ಪರಮೇಶ್ವರಿ ನಾಟ್ಯಾಲಯದ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಅ.12ರಂದು ಯಕ್ಷಗಾನ, ಅ.13ರಂದು ರಸಮಂಜರಿ
- ಅಕ್ಟೋಬರ್ 12ರಂದು ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಿದ್ದಾಪುರದ ನಿವೃತ್ತ ಉಪನ್ಯಾಸಕಿ ಲೀಲಾ ಬಿ. ಹೊಸೂರು ಉದ್ಘಾಟಿಸಲಿದ್ದಾರೆ. ನಂತರ ಜಲವಳ್ಳಿ ಕಲಾಧರ ಯಕ್ಷರಂಗ ಬಳಗದ ಕಲಾವಿದರಿಂದ ‘ಮಾಗಧ ವಧೆ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
- ಅಕ್ಟೋಬರ್ 13ರಂದು ಸಾಗರದ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಂದು ಹಾವೇರಿಯ ಜೂನಿಯರ್ ರಾಜ್ಕುಮಾರ್ ಕಲಾತಂಡದಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.
- ಅಕ್ಟೋಬರ್ 14ರಂದು ಶಿಮುಲ್ ನಿರ್ದೇಶಕ ದಯಾನಂದಗೌಡ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತೌಡತ್ತಿಯ ಮಹಾಗಣಪತಿ ಯುವ ನಾಟ್ಯ ಸಂಘದ ಕಲಾವಿದರು ‘ಸಾವಿರ ಹಳ್ಳಿ ಸರದಾರ’ ಸಾಮಾಜಿಕ ನಾಟಕ ಪ್ರದರ್ಶಿಸಲಿದ್ದಾರೆ.
- ಅಕ್ಟೋಬರ್ 15ರಂದು ಸಿಗಂದೂರಿನ ಧರ್ಮದರ್ಶಿ ರಾಮಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಗಾಯಕ ಶಶಿಧರ ಕೋಟೆ ಹಾಗೂ ಅವರ ತಂಡದಿಂದ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.
- ಅಕ್ಟೋಬರ್ 16ರಂದು ಆದಾಯ ತೆರಿಗೆ ನ್ಯಾಯಮಂಡಳಿ ಸದಸ್ಯ ಜಿ. ಮಂಜುನಾಥ ಮಳಲಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಂದ್ರಗುತ್ತಿಯ ರೇಣುಕಾಂಬ ಬಯಲಾಟ ತಂಡದ ಕಲಾವಿದರಿಂದ ‘ಅಹಿರಾವಣ–ಮಹಿರಾವಣ’ ಬಯಲಾಟ ಪ್ರದರ್ಶನ ನಡೆಯಲಿದೆ.
- ಅಕ್ಟೋಬರ್ 17ರಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಂದು ತುಮಕೂರಿನ ಜ್ಯೋತಿ ಮೆಲೋಡಿಯಸ್ ತಂಡದಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
- ಅಕ್ಟೋಬರ್ 18ರಂದು ಉಪಮುಖ್ಯಮಂತ್ರಿಯ ಆಪ್ತಸಹಾಯಕ ಕೆ. ಚನ್ನಬಸಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಂತರ ಚಂದ್ರಗುತ್ತಿಯ ರೇಣುಕಾಂಬ ಮಹಿಳಾ ನಾಟಕ ತಂಡದಿಂದ ‘ಉತ್ತರ ಭೂಪ’ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.
- ಅಕ್ಟೋಬರ್ 19ರಂದು ಸಂಸದ ಬಿ.ವೈ. ರಾಘವೇಂದ್ರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಗರದ ನಾಟ್ಯ ತರಂಗ ಟ್ರಸ್ಟ್ ಕಲಾವಿದರಿಂದ ‘ನವದುರ್ಗಾ ವೈಭವ’ ನೃತ್ಯರೂಪಕ ಪ್ರದರ್ಶನ ನಡೆಯಲಿದೆ.
- ಅಕ್ಟೋಬರ್ 20ರಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ಮಹಾಂತ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಶಿವಮೊಗ್ಗದ ಸಹಚೇತನ ನಾಟ್ಯಾಲಯದ ಕಲಾವಿದರಿಂದ ಸಮೂಹ ನೃತ್ಯಗಳ ಪ್ರದರ್ಶನ ನಡೆಯಲಿದೆ ಎಂದು ಎಂ.ಬಿ. ರೇಣುಕಾಪ್ರಸಾದ್ ಮಾಹಿತಿ ನೀಡಿದರು.
- ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 11ರಿಂದ 20ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಊರುಗಳ ಕಲಾತಂಡಗಳು ಈ ಬಾರಿಯ ಉತ್ಸವದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
