chandragutti renukamba temple : ಜೂನ್ 28 ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಹುಂಡಿ ಎಣಿಕೆ : ಸಂಗ್ರಹವಾದ ಹಣ ಎಷ್ಟು ಗೊತ್ತಾ
ಸೊರಬ : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ 2 ನೇ ತ್ರೈಮಾಸಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 32,34,350 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಕಳೆದ ಮಾರ್ಚ್ನಲ್ಲಿ ಮೊದಲ ತ್ರೈಮಾಸಿಕ ಹುಂಡಿ ಎಣಿಕೆಯನ್ನು ಮಾಡಲಾಗಿತ್ತು, ಆಗ 18,18,480 ರೂ. ಸಂಗ್ರಹವಾಗಿತ್ತು. ಇದೀಗ ನಡೆದ ಹುಂಡಿ ಎಣಿಕೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಹಣ ಸಂಗ್ರಹವಾಗಿದೆ. ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆಯುವ ಸಂದರ್ಭದಲ್ಲಿ ಕೊಠಡಿ ಸುತ್ತಲು ಸಿ ಸಿ ಕ್ಯಾಮರಾಗಳನ್ನು ಆಳವಡಿಸಲಾಗಿತ್ತು. ಸಾಗರ ಉಪವಿಭಾಗಾಧಿಕಾರಿ ವೀರೇಶ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
