Chatpat news : ಗಣೇಶ ವಿಸರ್ಜನೆ ಮೆರವಣಿಗೆ: ಜನರೇಟರ್ ಸ್ಪೋಟಗೊಂಡು ವ್ಯಕ್ತಿಗೆ ಗಾಯ
ಸಾಗರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರದ ಮಾಸ್ತಿಕಂಬ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಲೋಕೇಶ್ ಡಿಗಟೆಕೊಪ್ಪ ಎಂದು ಗುರುತಿಸಲಾಗಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್, ಈ ಘಟನೆಯಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.
Chatpat news ಆನೆ ನಿಯಂತ್ರಣಕ್ಕಾಗಿ ಅರಣ್ಯ ಇಲಾಖೆ ನಿರ್ಮಿಸಿದ ಗುಂಡಿಗೆ ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗ: ಆನೆ ಹಾವಳಿ ತಡೆಯಲು ಅರಣ್ಯ ಇಲಾಖೆ ನಿರ್ಮಿಸಿದ್ದ ಟ್ರೆಂಚ್‌ಗೆ (ಗುಂಡಿ) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆ ಬಳಿಕ ರಾತ್ರಿ ಮನೆಗೆ ಮರಳದೆ ನಾಪತ್ತೆಯಾಗಿದ್ದ ಇವರು, ಬೆಳಗ್ಗೆ ಅರಣ್ಯ ಇಲಾಖೆ ತೆಗೆದಿದ್ದ ಗುಂಡಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.
ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
ಶಿವಮೊಗ್ಗ: ಓವರ್‌ಟೇಕ್ ಮಾಡುವ ಭರದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಒಬ್ಬ ಯುವಕ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಮತ್ತು ಜಕಾತಿಕೊಪ್ಪ ಗ್ರಾಮಗಳ ನಡುವೆ ನಡೆದಿದೆ. ಮೃತಪಟ್ಟವರನ್ನು ನ್ಯಾಮತಿ ನಿವಾಸಿ ನರಸಿಂಹ (25) ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ತೆರಳುತ್ತಿದ್ದ ನರಸಿಂಹ ಅವರ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರಾದ ಶ್ರೀನಿವಾಸ್ ಮತ್ತು ನಾಗೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.