ಸಾಗರದಲ್ಲಿ ದೈವಜ್ಞ ಬ್ರಾಹ್ಮಣ ಮಠಾಧೀಶರ ಚಾತುರ್ಮಾಸ್ಯ ವ್ರತ! ವಿವರ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
sagara news malenadutoday image
sagara news malenadutoday image

Chaturmasya Vrata / ಮಲೆನಾಡು ಟುಡೆ ಸುದ್ದಿ / ಸಾಗರ / ನಗರದ ಇಕ್ಕೇರಿ ರಸ್ತೆಯಲ್ಲಿರುವ ದೈವಜ್ಞ ಬ್ರಾಹ್ಮಣ ಸಭಾ ಭವನದಲ್ಲಿ ಜುಲೈ 29 ರಿಂದ ಸೆಪ್ಟೆಂಬರ್ 26 ರವರೆಗೆ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ಹಾಗೂ ಸುಜ್ಞಾನೇಶ್ವರಿ ಭಾರತೀ ಸ್ವಾಮೀಜಿ ಅವರು ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲಿದ್ದಾರೆ.

  • ಜುಲೈ 29 ರಂದು ಅಂದರೆ ಇಂದು ಬೆಳಿಗ್ಗೆ 10 ಗಂಟೆಗೆ ಗುರುಪೂರ್ಣಿಮೆ ಕಾರ್ಯಕ್ರಮದ ಅಂಗವಾಗಿ ವ್ಯಾಸಪೂಜೆಯು ನಡೆದಿದೆ. ತದನಂತರ ಚಾತುರ್ಮಾಸ್ಯ ವ್ರತೋತ್ಸವ ಸಮಿತಿಯ ವತಿಯಿಂದ ಪಾದುಕಾ ಪೂಜೆ, ಸಭಾ ಕಾರ್ಯಕ್ರಮ ಹಾಗೂ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮಗಳು ನಡೆದವು.
  • ಇನ್ನೂ ಜುಲೈ 30 ರಿಂದ ಪ್ರತಿದಿನವೂ ಬೆಳಿಗ್ಗೆ 10:30 ರಿಂದ ಸಾಮೂಹಿಕ ಪಾದುಕಾ ಪೂಜೆ ಹಾಗೂ ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
  • ಮಧ್ಯಾಹ್ನ 12:30 ಕ್ಕೆ ಶ್ರೀಗಳ ಪಟ್ಟದ ದೇವರ ಮಹಾಪೂಜೆ ನಡೆಯಲಿದೆ ಹಾಗೂ ಸಂಜೆ 6 ರಿಂದ 7:30 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
  • ಬಳಿಕ 7:30 ಕ್ಕೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 26 ರಂದು ಬೆಳಿಗ್ಗೆ 8 ಗಂಟೆಗೆ ಚಾತುರ್ಮಾಸ್ಯದ ಸೀಮೋಲ್ಲಂಘನ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.

ಈ ಸಂಪೂರ್ಣ ಚಾತುರ್ಮಾಸ್ಯ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಗೌರವಾಧ್ಯಕ್ಷ ಮೋಹನ್ ಶೇಟ್, ಅಧ್ಯಕ್ಷ ಅರುಣಕುಮಾರ್ ಎಂ.ಎಸ್. ಮತ್ತು ಕಾರ್ಯಾಧ್ಯಕ್ಷ ಮಂಜುನಾಥ ವಿ. ವರ್ಣೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor