ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ | ಡಿಸಿ ಗುರುದತ್ತ ಹೆಗೆಡೆ ಮೇಜರ್‌ ಸೂಚನೆ |

Checking of vehicles at check post | DC Gurudatta Hegde Major Instructions |

ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ | ಡಿಸಿ ಗುರುದತ್ತ ಹೆಗೆಡೆ ಮೇಜರ್‌ ಸೂಚನೆ |
check post ,DC Gurudatta Hegde

Shivamogga  Apr 11, 2024  ಲೋಕಸಭಾ ಚುನಾವಣೆ 2024 ರ ಹಿನ್ನೆಲೆ ಶಿವಮೊಗ್ಗದ ಹಲವೆಡೆ ಚೆಕ್‌ಪೋಸ್ಟ್‌ಗಳನ್ನ ತೆರೆಯಲಾಗಿದೆ. ಈ ಚೆಕ್‌ಪೋಸ್ಟ್‌ಗಳಲ್ಲಿ ಸರ್ಕಾರಿ ವಾಹನಗಳನ್ನು ಸಹ ಅವಶ್ಯಕತೆಗೆ ತಕ್ಕಂತೆ ಪರಿಶೀಲನೆ ನಡೆಸುವಂತೆ ಡಿಸಿ ಗುರುದತ್ತ ಹೆಗೆಡೆ ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ನಲ್ಲಿ ನಡೆದ ಸಂವಾದದಲ್ಲಿ ಅವರು ತಿಳಿಸಿದ್ದಾರೆ. 

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ 

ಸರ್ಕಾರಿ ವಾಹನಗಳು ಸೇರಿದಂತೆ ಪೊಲೀಸ್‌ ವೆಹಿಲಲ್‌ ಹಾಗೂ ಆಂಬುಲೆನ್ಸ್‌ಗಳನ್ನ ತಪಾಸಣೆಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಗುರುದತ್ತ ಹೆಗೆಡೆ ತಿಳಿಸಿದ್ದಾರೆ.  

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಮಾಡಲು ಸಂತೋಷವಾಗುತ್ತಿದೆ. ಇಲ್ಲಿನ ಸಾಂಸ್ಕೃತಿಕ ಪರಿಸರ ಮತ್ತು ಜಾಗೃತ ಜನಸಮುದಾಯ ನನಗೆ ಇಷ್ಟವಾಯಿತು. ಮಲೆನಾಡಿ ನಲ್ಲಿರುವ ಜನರ ವಿಭಿನ್ನ ಸಮಸ್ಯೆಗಳ ಅರಿವೂ ನನಗಾಯಿತು. ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಲಾಗುತ್ತಿದೆ  

78 ಸಂಚಾರಿ ಜಾಗೃತ ದಳ ರಚನೆ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗುತ್ತಿದೆ. ಯಾವುದೇ ಧರ್ಮ ಮತ್ತು ಜಾತಿ ಆಧಾರಿತವಾಗಿ ಪ್ರಚಾರ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 

ನಕ್ಸಲ್ ಭೀತಿ ಶಿವಮೊಗ್ಗ ಲೋಕಸಭೆ  ಕ್ಷೇತ್ರದಲ್ಲಿ ಇಲ್ಲ. ಕ್ಷೇತ್ರಕ್ಕೆ ಹೊಂದಿಕೊಂಡಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಕ್ಸಲರು ಕಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದ್ದೇನೆ. ಈ ಸಂಬಂಧ ಜಿಲ್ಲಾರಕ್ಷಣಾಧಿಕಾರಿಗಳಜತೆ ಚರ್ಚೆ ಮಾಡಲಾಗಿದೆ. 

ಜಿಲ್ಲೆಯಲ್ಲಿ 6 ಹಳ್ಳಿಗಳಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಹೇಳಿದ್ದರು. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಯಾವುದೇ ಕೆಲಸದ ಭರವಸೆ ನೀಡಲಾಗದು.

400 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಈ ನಿಟ್ಟಿನಲ್ಲಿ  ಈಗಾಗಲೇ ಟ್ಯಾಂಕರ್ ಮತ್ತು ಕೊಳವೆ ಬಾವಿ ಕೊರೆಸುವ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಜಿಲ್ಲಾ ಡಳಿತ ಮುಂದಾಗಿದೆ. 



ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಕಾರ್ಯ ದರ್ಶಿ ನಾಗರಾಜ್ ನೇರಿಗೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ, ಪ್ರಧಾನ ಕಾರ್ಯದರ್ಶಿಸಂತೋಷ್ ಕಾಚಿನಕಟ್ಟೆ ಉಪಸ್ಥಿತರಿದ್ದರು. ಚಂದ್ರಶೇಖರ್