ಫೆಬ್ರವರಿ 8 ಕ್ಕೆ ಮುಖ್ಯಮಂತ್ರಿ ಫೆಬ್ರವರಿ 27ಕ್ಕೆ ಪ್ರಧಾನ ಮಂತ್ರಿ ಶಿವಮೊಗ್ಗಕ್ಕೆ ! ಏನೇನಿದೆ ಕಾರ್ಯಕ್ರಮ? ವಿವರ ಇಲ್ಲಿದೆ

Malenadu Today

ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಆಗಮನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  (basavaraj bommai) ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ  ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwarappa ) ಅವರು ತಿಳಿಸಿದ್ದಾರೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಮಾಲೊಚನೆ ನಡೆಸಿದ ಅವರು,  ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಶಿವಮೊಗ್ಗ ವಿಮಾನ ನಿಲ್ದಾಣ ಹೇಗೆ ಸಿದ್ಧವಾಗಿದೆ ನೋಡಿ

ಈ ಹಿನ್ನೆಲೆಯಲ್ಲಿ  ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23 ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಟಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ, ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ, ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ ಹಾಗೂ ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.

ಶಿವಮೊಗ್ಗದಲ್ಲಿ 200 ಕ್ಕೂ ಹೆಚ್ಚು ಮಕ್ಕಳ ಅಸ್ವಸ್ಥತೆಗೆ ಅಸಲಿ ಕಾರಣ ಏನು? ಸಂಸದ ರಾಘವೇಂದ್ರರವರು ಹೇಳಿದ್ದೇನು?

ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದ್ದು, ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 27 ಕ್ಕೆ ಪ್ರಧಾನ ಮಂತ್ರಿ ಆಗಮನ

ಇನ್ನೂ ಇತ್ತ ಈಶ್ವರಪ್ಪನವರು ಸಿಎಂ ಆಗಮನದ ಬಗ್ಗೆ ಮಾಹಿತಿ ನೀಡುವುದಕ್ಕೂ ಮುನ್ನ, ವಿಮಾನ ನಿಲ್ದಾಣದ ಉದ್ಘಾಟನೆಯ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ(bs yediyurappa) ಇದೇ ಫೆಬ್ರವರಿ 27 ಕ್ಕೆ ಬಹುತೇಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (@narendramodi ) ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಖಚಿತ ಎಂದಿದ್ಧಾರೆ. ಅವರ ಮಾತಿನಂತೆ ನಡೆದರೆ, ಫೆಬ್ರವರಿ 27 ಕ್ಕೆ ಮೋದಿ ನಗರಕ್ಕೆ ಬರಲಿದ್ದು, ಸರಿಸುಮಾರು 7500 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಸಂಸದ ಬಿ.ವೈ ರಾಘವೇಂದ್ರರವರು (B Y Raghavendra ) ಮಾಹಿತಿ ನೀಡಿದ್ದು ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ ಹಾಗು ಸ್ಮಾರ್ಟ್​ ಸಿಟಿ ಲೋಕಾರ್ಪಣೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನರೇಂದ್ರ ಮೋದಿಯವರಿಂದ ಚಾಲನೆ ಕೊಡಿಸಬೇಕು ಎಂಬ ಕಾರಣಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article