Chikkamagaluru accident :ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕನಕ ರಾಯಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಾವಣಗೆರೆ ಮೂಲದ ಪ್ರತಾಪ್ ರಾಜ್ ಎಂದು ಗುರುತಿಸಲಾಗಿದೆ.
Chikkamagaluru accident : ಘಟನೆ ವಿವರ
ಬುಧವಾರ ಬೆಳಿಗ್ಗೆ ಪ್ರತಾಪ್ ರಾಜ್ ಅವರು ತಮ್ಮ ಕುಟುಂಬದೊಂದಿಗೆ ಕಡೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಮೂಲಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಅವರ ನಿಯಂತ್ರಣ ಕಳೆದುಕೊಂಡ ಕಾರು, ಹಾಸನದಿಂದ ಬೀರೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದಾವಿಸಿದ್ದಾರೆ. ಅವರು ಫೋಮ್ ಸಿಂಪಡಿಸಿ, ಬೆಂಕಿ ತಗುಲದಂತೆ ಎಚ್ಚರಿಕೆ ವಹಿಸಿ, ಕ್ರೇನ್ ಮೂಲಕ ಟ್ಯಾಂಕರ್ ಅನ್ನು ಎತ್ತಿ ನಿಲ್ಲಿಸಿದ್ದಾರೆ.


ಈ ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಅರಸೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
