chikkamagaluru : ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ವಿದ್ಯುತ್ ಸ್ಪರ್ಶಿಸಿ ಆತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬನ್ನೂರ್ ನಲ್ಲಿ ನಡೆದಿದೆ. ಜ್ಯೋತಿ ಕುಮಾರ್ (28) ಮೃತ ದುರ್ದೈವಿ.
ಜ್ಯೋತಿಕುಮಾರ್ ತೋಟದಲ್ಲಿದ್ದ ವಿದ್ಯುತ್ ಪರಿವರ್ತಕದ ಬಳಿ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸರು ಘಟನಾಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
