ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಂದ ಮಗ

prathapa thirthahalli
Prathapa thirthahalli - content producer

Chikkamagaluru news : ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಂದ ಮಗ

ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ಸ್ವಂತ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಭವಾನಿ (52) ಹತ್ಯೆಯಾದ ದುರ್ದೈವಿ ಮಹಿಳೆಯಾಗಿದ್ದು, ಅವರ ಪುತ್ರ ಪವನ್ (28) ಕೊಲೆ ಆರೋಪಿ.

- Advertisement -

Chikkamagaluru news : ಹೇಗಾಯ್ತು ಘಟನೆ

ಕೂಲಿ ಕೆಲಸ ಮಾಡಿಕೊಂಡು ತಾಯಿಯೊಂದಿಗೆ ವಾಸವಿದ್ದ ಪವನ್, ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ಈ ವೇಳೆ ಯಾವುದೋ ವಿಚಾರಕ್ಕೆ ತಾಯಿಯೊಂದಿಗೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ಹೋಗಿ, ಆತ ತನ್ನ ತಾಯಿಯನ್ನು ಕೊಲೆ ಮಾಡಿದ್ದಾನೆ. ಆ ನಂತರ, ಪ್ರಜ್ಞಾಹೀನನಂತೆ ತಾಯಿಯ ಶವಕ್ಕೆ ಬೆಂಕಿ ಹಚ್ಚಿ, ನಿದ್ರೆಗೆ ಜಾರಿದ್ದಾನೆ ಎನ್ನಲಾಗಿದೆ.

ನೆರೆಹೊರೆಯವರಿಂದ ಮಾಹಿತಿ ಪಡೆದ ಆಲ್ಲೂರು ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪವನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Chikkamagaluru news

Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *