Chikkamagaluru Sandalwood Theft Case ’ಚಿಕ್ಕಮಗಳೂರು | ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಇಲ್ಲಿನ ಬಸವನಹಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಗಂಧದ ಕಳವು ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿ ಹಲವು ದೂರು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ಇದೀಗ ಕಾರ್ಯಾಚರಣೆ ಮುಗಿಸಿ ಆರೋಪಿಗಳನ್ನ ಅರೆಸ್ಟ್ ಮಾಡಿದೆ. ಬಂಧಿತ ಆರೋಪಿಗಳನ್ನು ನಗರದ ಕೆಂಪನಹಳ್ಳಿಯ ಆಂಜನೇಯ, ಬಸವನಹಳ್ಳಿಯ ಸುಬ್ರಹ್ಮಣ್ಯ ಹಾಗೂ ಅರವಿಂದ ನಗರದ ಸಂಜಯ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 93 ಕೆಜಿ ತೂಕದ ಶ್ರೀಗಂಧದ ತುಂಡುಗಳನ್ನು ಹಾಗೂ ಕೃತ್ಯ ಎಸಗಲು ಬಳಸುತ್ತಿದ್ದ 2 ಲಕ್ಷ ರೂಪಾಯಿ ಮೌಲ್ಯದ ಕೆಟಿಎಂ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕ & ಅರಣ್ಯ ಪ್ರದೇಶಗಳಲ್ಲಿ ಸರಣಿಯಾಗಿ ನಡೆಯುತ್ತಿದ್ದ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳಲ್ಲಿ ಪೊಲೀಸ್ ತಂಡವು ಮೂರು ಜನ ಅಂತರ್ ಜಿಲ್ಲಾ ಆರೋಪಿಗಳನ್ನು ದಸ್ತಗಿರಿ ಮಾಡಿ, 5 ಲಕ್ಷ ಮೌಲ್ಯದ 93 ಕೆಜಿ ತೂಕದ ಶ್ರೀಗಂಧದ ತುಂಡುಗಳು & 2 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಂಡಿರುತ್ತಾರೆ.
1/2 pic.twitter.com/Z01V7K1zxV— SP Chikkamagaluru (@ckmpolice) January 12, 2026
ಶಿವಮೊಗ್ಗ ಉದ್ಯಮಿಗೆ ಮಹಾರಾಷ್ಟ್ರದಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ, 3 ದಿನ ಕೂಡಿಟ್ಟು 2.17 ಕೋಟಿ ಲೂಟಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
