Chikkanna marriage : ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಹಸೆಮಣೆ ಏರಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ನಟನ ಮದುವೆಯ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.
ಚಿಕ್ಕಣ್ಣ ಅವರನ್ನು ಮದುವೆಯಾಗಲಿರುವ ಪಾವನಾ ಅವರು ವೃತ್ತಿಯಲ್ಲಿ ಉದ್ಯಮಿ ಮತ್ತು ಮೆಕಾನಿಕಲ್ ಇಂಜಿನಿಯರ್ ಆಗಿದ್ದಾರೆ. ಇವರ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದ್ದು, ಮದುವೆ ದಿನಾಂಕ ಮತ್ತು ನಿಶ್ಚಿತಾರ್ಥದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಚಿಕ್ಕಣ್ಣನ ಮದುವೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈಗ ಈ ಸುದ್ದಿ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.
Chikkanna marriage
