SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 1, 2024 | CHINA GARLIC | ಶಿವಮೊಗ್ಗದಲ್ಲಿ ಚೀನಾ ಬೆಳ್ಳುಳ್ಳಿ ಹಾವಳಿ ಮುಂದುವರಿದಿದೆ. ಮೊದಲ ದಿನ ಹಲವು ಕಡೆಗಳಲ್ಲಿ ದಾಳಿ ಮಾಡಿ ಚೀನಾ ಬೆಳ್ಳುಳ್ಳಿ ಸ್ಯಾಂಪಲ್ಸ್ ಪಡೆದಿದ್ದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (Food Safety and Standards Authority of India) ಎಫ್ಎಸ್ಎಸ್ಎಐ ಅಧಿಕಾರಿಗಳು ಎರಡನೇ ದಿನವೂ ತಮ್ಮ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪ್ರಭಾರ ಜಿಲ್ಲಾ ಅಂಕಿತ ಅಧಿಕಾರಿ ಡಾ.ಪಿ.ಹರೀಶ್ ಮಾರ್ಗದರ್ಶನದಲ್ಲಿ ಹಲವೆಡೆ ದಾಳಿ ನಡೆಸಿರುವ ಆಧಿಕಾರಿಗಳು ನಿಷೇಧಿತ ಬೆಳ್ಳುಳ್ಳಿ ಸ್ಯಾಂಪಲ್ಸ್ ವಶಕ್ಕೆ ಪಡೆದು ಅವುಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಅಲ್ಲದೆ ಇಂತಹ ಬೆಳ್ಳುಳ್ಳಿಗಳನ್ನ ಮಾರದಂತೆ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.
ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ದೂರು ಬಂದಿದ್ದವು, ಈ ಸಂಬಂಧ ಜಿಲ್ಲಾಡಳಿತದ ಸೂಚನೆ ಮೇರೆಗೆ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಒಟ್ಟು 33 ಚೀಲದಷ್ಟು ಬೆಳ್ಳುಳ್ಳಿ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.