3 ಸಾವಿರಕ್ಕೂ ಅಧಿಕ ಮಂದಿಯಿಂದ ಇಂದು ಸೇಕ್ರೆಡ್ ಹಾರ್ಟ್ ಚರ್ಚ್​ನಿಂಧ ಡಿಸಿ ಕಚೇರಿವರೆಗೂ ಮೌನ ಮೆರವಣಿಗೆ!

ಹಂಚಿಕೊಳ್ಳಿ
WhatsApp Facebook X Telegram
Christian Forum Plans Silent March in Shivamogga on November 12 Seeking Repeal of Anti-Conversion Law
Christian Forum Plans Silent March in Shivamogga on November 12 Seeking Repeal of Anti-Conversion Law

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಅಧಿನಿಯಮ–2022 (ಮತಾಂತರ ನಿಷೇಧ ಕಾಯ್ದೆ) ರದ್ದುಪಡಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಾನವ ಹಕ್ಕುಗಳಿಗಾಗಿ ಏಕೀಕೃತ ಕ್ರೈಸ್ತ ವೇದಿಕೆ ವತಿಯಿಂದ ನ.12ರಂದು ನಗರದಲ್ಲಿ ಮೌನ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಸೇಕ್ರೆಡ್ ಹಾರ್ಟ್ ಪ್ರಧಾನಾಲಯದಿಂದ ಆರಂಭವಾಗುವ ಮೆರವಣಿಗೆ ಬಿ.ಎಚ್. ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಗೋಪಿ ವೃತ್ತ ಹಾಗೂ ಕೋರ್ಟ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ.

2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಾಯ್ದೆ ರದ್ದುಪಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದರೂ ಭರವಸೆ ಈಡೇರಿಸಿಲ್ಲ. ಕಾಯ್ದೆಯಿಂದ ಸಂವಿಧಾನದ 25ನೇ ವಿಧಿಯಡಿ ದೊರೆತಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿಗೆ ಧಕ್ಕೆಯಾಗುವ ಆತಂಕವಿದೆ. ಆದ್ದರಿಂದ ಕಾಯ್ದೆ ರದ್ದುಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ವೇದಿಕೆಯ ಕಾರ್ಯಕಾರಿ ಸಮಿತಿ ಸದಸ್ಯ ಫಾದರ್ ಸ್ಪ್ಯಾನಿಷ್ ಡಿಸೋಜ ತಿಳಿಸಿದ್ದಾರೆ.

ಮೆರವಣಿಗೆಯಲ್ಲಿ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕ್ರೈಸ್ತ ಸಮುದಾಯದ 3 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor