ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಮೈಸೂರಿನ ಕೇಂದ್ರೀಯ ಪೆಟ್ರೋರಸಾಯನ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ವತಿಯಿಂದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್‌ನ ಸಿಎಸ್‌ಆರ್ ಯೋಜನೆಯಡಿ ಕರ್ನಾಟಕದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ 3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
- ‘ಸಹಾಯಕ ಮೆಷಿನ್ ಆಪರೇಟರ್–ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್’ ಹಾಗೂ ‘ಸಹಾಯಕ ಮೆಷಿನ್ ಆಪರೇಟರ್–ಇಂಜೆಕ್ಷನ್ ಮೋಲ್ಡಿಂಗ್’ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಆಹಾರ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ.
- ತರಬೇತಿಗೆ ಸೇರಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ 18ರಿಂದ 35 ವರ್ಷದೊಳಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 10ರಿಂದ ಆರಂಭವಾಗಲಿದೆ. ತರಬೇತಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿ ಮೂಲಕ ಉದ್ಯೋಗಾವಕಾಶದ ಭರವಸೆ ನೀಡಲಾಗುತ್ತದೆ. ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ನಿರುದ್ಯೋಗಿ ಯುವಕ ಮತ್ತು ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಸಿಪೆಟ್: ಸಿಎಸ್‌ಟಿಎಸ್, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು–570016 ಇಲ್ಲಿಗೆ ಭೇಟಿ ನೀಡಬಹುದು. 9483431968 ಅಥವಾ 9739196375 ಸಂಖ್ಯೆಯನ್ನು ಸಂಪರ್ಕಿಸಬಹುದು. www.cipet.gov.in ವೆಬ್‌ಸೈಟ್ ಮೂಲಕವೂ ಮಾಹಿತಿ ಪಡೆಯಬಹುದು ಎಂದು ಮಾಹಿತಿ ನೀಡಲಾಗಿದೆ.
