ಶಿವಮೊಗ್ಗ : 42 ಸಾವಿರ ಕನಿಷ್ಟ ವೇತನಕ್ಕೆ ಆಗ್ರಹಿಸಿ ಲಕ್ಷಾಂತರ ಕಾರ್ಮಿಕರಿಂದ ದೆಹಲಿಯಲ್ಲಿ ಬೃಹತ್​ ಪ್ರತಿಭಟನೆ, ಯಾವಾಗ ? 

ಹಂಚಿಕೊಳ್ಳಿ
WhatsApp Facebook X Telegram
CITU Delhi Protest (Dec 1–3): 1 Lakh+ Workers
CITU Delhi Protest (Dec 1–3): 1 Lakh+ Workers

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಡಿ. 1ರಿಂದ 3ರವರೆಗೆ ದೆಹಲಿಯಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಎಂ. ನಾರಾಯಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಾರ್ಮಿಕರ ನಡೆ ಸಂಸತ್ತಿನ ಕಡೆ ಘೋಷಣೆಯೊಂದಿಗೆ ನಡೆಯುವ ಹೋರಾಟದಲ್ಲಿ ದೇಶದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ 120 ಮಂದಿ ಹಾಗೂ ರಾಜ್ಯದಿಂದ 6,700 ಮಂದಿ ಭಾಗವಹಿಸಲಿದ್ದಾರೆ ಎಂದರು.

ಎಲ್ಲ ಕಾರ್ಮಿಕರಿಗೆ 42 ಸಾವಿರ ಕನಿಷ್ಠ ವೇತನ ಹಾಗೂ 21 ಸಾವಿರ ಸಾರ್ವತ್ರಿಕ ಕನಿಷ್ಠ ಪಿಂಚಣಿ ನಿಗದಿಪಡಿಸಬೇಕು. ಸ್ಕೀಂ ನೌಕರರನ್ನು ಕಾರ್ಮಿಕರೆಂದು ಗುರುತಿಸಿ ಶಾಸನಬದ್ಧ ಸೌಲಭ್ಯ ಒದಗಿಸಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಂಘಟನೆಗಳ ಹೋರಾಟಗಳನ್ನು ಅಪರಾಧೀಕರಿಸುವುದನ್ನು ನಿಲ್ಲಿಸಬೇಕು. ನೈಸರ್ಗಿಕ ಸಂಪನ್ಮೂಲ ಹಾಗೂ ಜನರ ಹಕ್ಕುಗಳನ್ನು ರಕ್ಷಿಸಬೇಕು. ಭೂಸ್ವಾಧೀನದಿಂದ ಸ್ಥಳಾಂತರಗೊಳ್ಳುವವರಿಗೆ ಪುನರ್ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಬಿಸಿಯೂಟ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಹನುಮಕ್ಕ ಮಾತನಾಡಿ, ಕ್ಲಸ್ಟರ್ ಕಿಚನ್ ಯೋಜನೆ ವಿರೋಧಿಸಿ ನ. 25ರಿಂದ ರಾಜ್ಯದ 28 ಜಿಲ್ಲೆಗಳಲ್ಲಿ ಬಿಸಿಯೂಟ ನೌಕರರು ಅಡುಗೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ. ಶಾಲೆಗಳಲ್ಲಿಯೇ ಹಿಂದಿನಂತೆ ಅಡುಗೆ ವ್ಯವಸ್ಥೆ ಮುಂದುವರಿಸಬೇಕು. ಮುಖ್ಯಮಂತ್ರಿಗಳು ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು. 

ಆಶಾ ಕಾರ್ಯಕರ್ತೆಯರ ಹೋರಾಟಕ್ಕೂ ಬೆಂಬಲ ವ್ಯಕ್ತಪಡಿಸಿದ ಅವರು, ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor