ತಿರುವಳ್ಳುವರ್ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
Kuvempu University Shivamogga malenadu toda image
Kuvempu University Shivamogga

Clerk job application / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ತಿರುವಳ್ಳುವರ್ ಪತ್ತಿನ ಸಹಕಾರ ಸಂಘದಲ್ಲಿ ಖಾಲಿ ಇರುವ ಪುರುಷ ಸದಸ್ಯ ಗುಮಾಸ್ತ (ಕ್ಲರ್ಕ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ನೀಡಲಾಗಿರುವ ಪ್ರಕಟಣೆಯ ವಿವರ ಹೀಗಿದೆ.

ಈ ಮೇಲ್ಕಂಡ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಘದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರೈಸಿರಬೇಕು. ಇದರ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಹೊಂದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗದ ಕುರಿತಾದ ಇತರ ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿಯ ದೂರವಾಣಿ ಸಂಖ್ಯೆ 08182-471409 ಅಥವಾ ಮೊಬೈಲ್ ಸಂಖ್ಯೆ 7483232728 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor