Cm siddaramaiah : ಚಿತ್ರದುರ್ಗ : ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಚುನಾವಣೆಯಲ್ಲಿ ಅಕ್ರಮ ನಡೆದಿದ್ದೇ ನಿಜವಾಗಿದ್ದರೆ, ಮುಖ್ಯಮಂತ್ರಿಗಳು 136 ಕಾಂಗ್ರೆಸ್ ಶಾಸಕರು ಮತ್ತು ಸಂಸದರ ರಾಜೀನಾಮೆ ಕೊಡಿಸಿ, ಮತ್ತೆ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.
Cm siddaramaiah ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದು ರೀತಿಯ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ವಾಸ್ತವಿಕ ಸತ್ಯದಿಂದ ದೂರ ಹೋಗದಂತೆ ಕಿವಿಮಾತು ಹೇಳುತ್ತೇನೆ. ದೇಶದ ಜನತೆಗೆ ಇವಿಎಂ ಬಗ್ಗೆ ವಿಶ್ವಾಸ ಹೋಗಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವದ ಬಗ್ಗೆಯೇ ವಿಶ್ವಾಸ ಕಳೆದುಕೊಂಡಿದ್ದಾರೆ. ದೇಶವನ್ನು ಮುನ್ನಡೆಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ ಇದೆ ಎಂದು ಜನರಿಗೆ ಗೊತ್ತಿದೆ, ಸ್ಥಳೀಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸುವ ಬಗ್ಗೆ ತೀರ್ಮಾನ ನಡೆಯುತ್ತಿದೆ. “ಇದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮೇಲೆಯೇ ವಿಶ್ವಾಸ ಇಲ್ಲ ಎಂಬುದನ್ನು ತೋರಿಸುತ್ತದೆ. ಇದನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಬೇಕು. ಈ ರೀತಿಯ ಹುಚ್ಚಾಟ ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಮಾನ” ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ ವಿಜಯೇಂದ್ರ, ರಾಜ್ಯದಲ್ಲಿ ಅಭಿವೃದ್ಧಿ ಮಾಡುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ ಎಂದು ಆರೋಪಿಸಿದರು. “ಶಿಕ್ಷಕರ ನೇಮಕಾತಿ ಆಗುತ್ತಿಲ್ಲ, ಗ್ರಾಮೀಣ ಭಾಗದ ರೈತರಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಆದರೆ, ಸರ್ಕಾರ ಹೆಲಿಕಾಪ್ಟರ್ ಖರೀದಿಗೆ ಹೊರಟಿದೆ. ಸರ್ಕಾರಕ್ಕೆ ಮರ್ಯಾದೆ ಇದೆಯಾ ಎಂದು ರಾಜ್ಯದ ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳ ಸರ್ಕಾರಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಉದಾಹರಣೆ ನೀಡಿದರು. ಮುಖ್ಯಮಂತ್ರಿಗಳು ಕೇವಲ ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯದ ಮುಖ್ಯಮಂತ್ರಿಗಳು ಎಂಬುದನ್ನು ಅರ್ಥ ಮಾಡಿಕೊಂಡು, ರಾಜ್ಯದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
Cm siddaramaiah
