
ಶಿವಮೊಗ್ಗ : ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದೊಂದು ದಾಖಲೆಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ . ರಾಜ್ಯದಲ್ಲಿ ಸುದೀರ್ಘ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ದಿವಂಗತ ದೇವರಾಜು ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಸರಿಗಟ್ಟಿದ್ದಾರೆ. ಎರಡು ಅವಧಿಗಳಲ್ಲಿ ಒಟ್ಟು 2,792 ದಿನಗಳ ಕಾಲ ರಾಜ್ಯದ ಚುಕ್ಕಾಣಿ ಹಿಡಿದು ಆಡಳಿತ ನಡೆಸುವ ಮೂಲಕ ಸಿದ್ದರಾಮಯ್ಯ ಅವರು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.


ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ : ಶಿವಮೊಗ್ಗದಲ್ಲಿ ಒಂದು ತಿಂಗಳ ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿ
CM Siddaramaiah ಈ ಸಾಧನೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸಂಭ್ರಮದಲ್ಲಿ ಮುಳುಗಿದ್ದು, ಶಿವಮೊಗ್ಗ ನಗರದಲ್ಲೂ ಸಡಗರದ ವಾತಾವರಣ ನಿರ್ಮಾಣವಾಗಿತ್ತು. ನಗರದ ಅಶೋಕ ಸರ್ಕಲ್ ಹಾಗೂ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಅಭಿಮಾನಿಗಳು ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ನೆಚ್ಚಿನ ನಾಯಕನ ಪರವಾಗಿ ಘೋಷಣೆಗಳನ್ನು ಕೂಗಿದ ಅಭಿಮಾನಿಗಳು, ಸಿದ್ದರಾಮಯ್ಯ ಅವರನ್ನು ‘ಭಾಗ್ಯಗಳ ವಿಧಾತ’ ಮತ್ತು ‘ಗ್ಯಾರಂಟಿ ರಾಮಯ್ಯ’ ಎಂದು ಕೊಂಡಾಡಿದರು.

ಸಂಭ್ರಮಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಅತ್ಯಂತ ಪ್ರಿಯವಾದ ನಾಟಿ ಕೋಳಿ ಬಿರಿಯಾನಿ ಹಾಗೂ ಲಾಡುಗಳನ್ನು ನೂರಾರು ಜನರಿಗೆ ಹಂಚುವ ಮೂಲಕ ಅಭಿಮಾನಿಗಳು ತಮ್ಮ ಸಂತಸ ವ್ಯಕ್ತಪಡಿಸಿದರು.
CM Siddaramaiah Matches Devaraj Urs Record



