ಎದುರುಬದುರು ಬಂದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ!

ಎದುರುಬದುರು ಬಂದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ!
Collision between bikes

Shivamogga Apr 18, 2024   ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ಬೈಕ್‌ ಸವಾರರು ಗಾಯಗೊಂಡಿದ್ದಾರೆ. ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಶಿರಾಳಕೊಪ್ಪ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಎದುರುಬದುರಾಗಿ ಬರುತ್ತಿದ್ದ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಬೈಕ್‌ ಸವಾರರು ಕೆಳಕ್ಕೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಇನ್ನೂ  ಸ್ಥಳಕ್ಕೆ ಬಂದ ಪೊಲೀಸರು ಎರಡು ಬೈಕ್‌ಗಳನ್ನ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.