ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎ.ಎಚ್.ಸುನೀಲ್ ಅರ್ಜಿ

ಹಂಚಿಕೊಳ್ಳಿ
WhatsApp Facebook X Telegram
Shivamogga Congress A.H. Sunil Joins President Race
Shivamogga Congress A.H. Sunil Joins President Race

Congress ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗದ್ದುಗೆ ಯಾರು ಏರುತ್ತಾರೆ ಎಂಬ ಕುತೂಹಲ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಈಗ ಬಿರುಸಿನ ಪೈಪೋಟಿ ನಡೆಯುತ್ತಿದೆ. ಅದರಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಚ್.ಸುನೀಲ್ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ಉಸ್ತುವಾರಿ ಎಸ್.ಟಿ.ಹಾಲಪ್ಪ ಅವರಿಗೆ ಅರ್ಜಿ ಸಲ್ಲಿಸಿದರು.

ಗುರುಪೂರ್ಣಿಮೆ ವಿಶೇಷ: ಶಿವಮೊಗ್ಗದ ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಪೂಜೆ!

ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿರುವ ಎ.ಎಚ್.ಸುನೀಲ್ ಅವರು ನಾಲ್ಕು ದಶಕಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದು, ಎನ್‌ಎಸ್‌ಯುಐ ನಗರ ಘಟಕದ ಕಾರ್ಯದರ್ಶಿ, ಉಪಾಧ್ಯಕ್ಷ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ, ಯೂತ್ ಕಾಂಗ್ರೆಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕಾರ್ಯಕಾರಿ ಸಮಿತಿ ಸದಸ್ಯ, ಉಪಾಧ್ಯಕ್ಷರಾಗಿಯೂ ಪಕ್ಷಕಾಗಿ ಸೇವೆ ಸಲ್ಲಿಸಿದ್ದಾರೆ.

ರಾಜಕೀಯ ಚಟುವಟಿಕೆಗಳೊಂದಿಗೆ ಪ್ರಾಧಿಕಾರ, ಸೊಸೈಟಿ ಹಾಗೂ ಸಂಘಸಂಸ್ಥೆಸೇರಿದಂತೆ ಸಮಾಮುಖಿ ಸೇವಾ ಚಟುವಟಿಕೆಗಳಲ್ಲೂ ಸಕ್ರಿಯರಾಗಿರುವ ಎ.ಎಚ್.ಸುನೀಲ್, ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರು, ಶಿವಮೊಗ್ಗ ಹೌಸಿಂಗ್ ಕೋಆಪರೇಟಿವ್ ಸೊಸೈಟಿ ಮಾಜಿ ನಿರ್ದೇಶಕರು, ಶಿವಮೊಗ್ಗ ಸ್ಪೋರ್ಟ್ಸ್ ಆಂಡ್ ಕಲ್ಚರ್ ಅಕಾಡೆಮಿ ಅಧ್ಯಕ್ಷ, ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ, ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿ ಕಾರ್ಯದರ್ಶಿ, ಶ್ರೀ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿ ಸಾಂಸ್ಕೃತಿಕ ಸಮಿತಿ ಸಂಚಾಲಕ, ಶ್ರೀ ಕರಿದೇವರ ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಕೋಟೆ ಶ್ರೀ ಸೀತಾರಾಮಾಂಜನೇಯ ಸದಸ್ಯರಾಗಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀಧರಮೂರ್ತಿ, ಮಧುಸೂದನ್ ಎಸ್.ಬಿ., ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿನಯ್ ತಾಂಡ್ಲೆ, ವಾರ್ಡ್ ಅಧ್ಯಕ್ಷ ಮಲ್ಲಿಕಾರ್ಜುನ, ಮದನ್‌ಕುಮಾರ್, ಜಿಲ್ಲಾ ಕಾಂಗ್ರೆಸ್‌ನ ವಿನೋದ್ ಕುಮಾರ್, ಕೇಶವ್, ಅಶೋಕ್, ರಘು, ಸತೀಶ್, ಆಶೀಶ್, ವೈ.ಎಸ್.ಕುಮಾರ್ ಮತ್ತಿತರರು ಹಾಜರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor