ಶಿವಮೊಗ್ಗ : ಕಾಂಗ್ರೆಸ್​ ವತಿಯಿಂದ ಬೃಹತ್​ ಪ್ರತಿಭಟನೆ, 10 ಸಾವಿರ ಜನ ಸೇರುವ ನಿರೀಕ್ಷೆ, ಕಾರಣವೇನು

Congress Mega Protest ಶಿವಮೊಗ್ಗ : ನೀಟ್​ ಪರೀಕ್ಷೆಯನ್ನು ರದ್ದುಗೊಳಿಸಿ ಸಿ ಇ ಟಿ ಪರೀಕ್ಷೆಯನ್ನು ಜಾರಿಗಳಿಸಿಬೇಕು ಹಾಗೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ರ ರಾಜೀನಾಮೆಗೆ ಆಗ್ರಹಿಸಿ ಜುಲೈ 01 ರಂದು ಜಿಲ್ಲಾ ಕಾಂಗ್ರೆಸ್​ ನೇತೃತ್ವದಲ್ಲಿ ಹಾಗೆಯೇ ಎನ್​ ಎಸ್​ ಯು ಐ ವತಿಯಿಂದ ಬೃಹತ್​ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಅಡ್ಡಮತದಾನ! ಶಿವಮೊಗ್ಗದ ಇಬ್ಬರು ಶಾಸಕರಿಂದಲೇ ಕಾಂಗ್ರೆಸ್​ಗೆ ವೋಟ್ : ಆರ್​ಎಂ ಮಂಜುನಾಥ ಗೌಡ

ಈ ಕುರಿತು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್​​ ಪ್ರಸನ್ನಕುಮಾರ್ ಮಾತನಾಡಿ, ದೇಶಾದ್ಯಂತ ವಿದ್ಯಾರ್ಥಿಗಳ ಪರವಾಗಿ ರಾಹುಲ್ ಗಾಂಧಿ ಅವರು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ನೀಟ್ ಮರು ಪರೀಕ್ಷೆ ಆದಾಗ ವಿದ್ಯಾರ್ಥಿಗಳು ಎದುರಿಸಿದ ಸಮಸ್ಯೆಗಳ ಬಗ್ಗೆ ಅವರು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಪ್ರಸ್ತುತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಹಗರಣಗಳು ಇದೇನು ಮೊದಲಲ್ಲ, ಈ ಹಿಂದಿನಿಂದಲೂ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಆದರೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿದ್ಯಾರ್ಥಿಗಳ ಹಿತದ ಬಗ್ಗೆ ಒಂದೇ ಒಂದು ಹೇಳಿಕೆಯನ್ನೂ ನೀಡುತ್ತಿಲ್ಲ. ಪ್ರಧಾನಿ ಮೋದಿ ಅವರು ಎಲ್ಲೋ ಹೋಗಿ ಯಾರಿಗೋ ಚಾಕೊಲೇಟ್ ಕೊಡುವುದನ್ನು ಬಿಟ್ಟು, ಈ ಗಂಭೀರ ವಿಷಯದ ಬಗ್ಗೆ ಬಾಯಿ ಬಿಟ್ಟು ಮಾತನಾಡಬೇಕು ಎಂದರಯ. 

ಹಿಂದೆ ವೀರಪ್ಪ ಮೊಯ್ಲಿ ಅವರು ಜಾರಿಗೆ ತಂದಿದ್ದ ಸಿಇಟಿ ಪರೀಕ್ಷೆಯಿಂದಾಗಿ ಅನೇಕ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಅನುಕೂಲವಾಗಿತ್ತು. ಆದ್ದರಿಂದ ಕೂಡಲೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯದಲ್ಲಿ ಸಿಇಟಿ ಪರೀಕ್ಷೆಯನ್ನೇ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಜೊತೆಗೆ ವೈಫಲ್ಯದ ಹೊಣೆ ಹೊತ್ತು ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಮತ್ತು ಪ್ರಧಾನಿಯವರು ಆ ರಾಜೀನಾಮೆಯನ್ನು ತಕ್ಷಣವೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಳೆ ಜುಲೈ 01 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಮೆರವಣಿಗೆಯು ನಗರದ ಸೈನ್ಸ್ ಮೈದಾನದಿಂದ ಆರಂಭವಾಗಿ, ನಂತರ ಗೋಪಿ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಾಗುವುದು. ಈ ಹೋರಾಟದಲ್ಲಿ ಸಚಿವ ಮಧು ಬಂಗಾರಪ್ಪ, ಪ್ರಮುಖ ನಾಯಕರಾದ ಕಿಮ್ಮನೆ ರತ್ನಾಕರ್, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕರು ಭಾಗವಹಿಸಲಿದ್ದು, ಸರಿ ಸುಮಾರು 10 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ಹಾಲಪ್ಪ, ಶಿವಾನಂದ, ದೇವೇಂದ್ರಪ್ಪ, ವಿಜಯ್ ಸೇರಿದಂತೆ ಜಿಲ್ಲೆಯ ಪ್ರಮುಖರು ಉಪಸ್ಥಿತರಿದ್ದರು.

Congress Mega Protest in Shivamogga on July 1