ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್​​​ ಕಾರ್ಯಕರ್ತರು, ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
Congress Protest Leaders Detained During BJP ofc
Congress Protest Leaders Detained During BJP ofc

ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವುದನ್ನು ವಿರೋಧಿಸಿ ಹಾಗೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯವನ್ನು (ಇಡಿ) ಅನಗತ್ಯವಾಗಿ ಬಳಸಿಕೊಂಡು ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಇಂದು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತು.

Malenadu Today Shivamogga

ಸಾಗರದ ಇಡುವಾಣಿ ರಸ್ತೆಯಲ್ಲಿ ಭೀಕರ ಅವಘಡ: ಸ್ಕೂಲ್​ ಬಸ್, ಕೆಎಸ್​ಆರ್​ಟಿಸಿ ಬಸ್ ಮುಖಾಮುಖಿ ಡಿಕ್ಕಿ! ಹಲವು ಮಕ್ಕಳಿಗೆ ಪೆಟ್ಟು

Congress Protest  ನಗರದ ಜೈಲ್ ವೃತ್ತದಿಂದ ಬಿಜೆಪಿ ಕಚೇರಿಯತ್ತ ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ಕಚೇರಿಯ ಸಮೀಪವೇ ತಡೆದು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ‘ಅಯ್ಯಯ್ಯೋ ಅನ್ಯಾಯ, ಬೇಕೇ ಬೇಕು ನ್ಯಾಯ’ ಎಂದು ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಮುಖಂಡರನ್ನು ತಮ್ಮ ವಶಕ್ಕೆ ಪಡೆದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Congress Protest Leaders Detained During BJP ofc

Congress Protest Leaders Detained During BJP Office

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor