MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಕಾಂಗ್ರೆಸ್ ಇವತ್ತು ಬಿಜೆಪಿ ಸರ್ಕಾರದ ವಿರುದ್ಧ ಎರಡು ಪ್ರತಿಭಟನೆಗಳನ್ನು ನಡೆಸಿದೆ. ಮುಖ್ಯವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಬಿಜೆಪಿಯ ‘ಗೋ ಸಂರಕ್ಷಣೆ ವಿರೋಧಿ ಧೋರಣೆಗೆ ಖಂಡಿಸಿ ಪ್ರತಿಭಟಿಸಿದರು.
ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ಯಾ? ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಳ್ಳುತ್ತಿದೆ ಕ್ರಮ! ಏನದು ? ವಿವರ ಇಲ್ಲಿದೆ ಓದಿ
ಮಹಾನಗರ ಪಾಲಿಕೆ ಮುಂಭಾಗ ಗೋಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು 2019ರಲ್ಲಿ ಗೋ ಸಂರಕ್ಷಣೆ ಮಾಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ. 2019 ರಿಂದ 2023ರ ಆಯವ್ಯಯದಲ್ಲಿ ಗೋ ಸಂರಕ್ಷಣೆಗೆ 50 ಲಕ್ಷ ರೂಪಾಯಿ ಅನುದಾನ ಘೋಷಣೆ ಮಾಡಿದೆ, ಆದರೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ರು. ಈ ಮೂಲಕ.ಗೋಮಾತೆಗೆ ಬಿಜೆಪಿ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಕಾರ್ಪೊರೇಟರ್ಗಳು ದೂರಿದ್ದಾರೆ.
ಇನ್ನೊಂದೆಡೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕೇಂದ್ರ ಸರ್ಕಾರ ಅಡುಗೆ ಅನಿಲದ ಬೆಲೆಯನ್ನು ಏರಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ. ಇವತ್ತು ಮಹಾವೀರ ಸರ್ಕಲ್ ನಲ್ಲಿಯೇ ಕುಳಿತು ಧರಣಿ ನಡೆಸಿದ ಕಾರ್ಯಕರ್ತರು, ಖಾಲಿ ಸಿಲಿಂಡರ್ ಪ್ರದರ್ಶಿಸಿದ್ರು. ಅಲ್ಲದೇ ಸೌದೆ ಹಿಡಿದು ಘೋಷಣೆ ಕೂಗಿದರು. ಇನ್ನೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧವೂ ದಿಕ್ಕಾರ ಕೇಳಿಬಂತು.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #shivamoggaairport
