coronavirus : ಶಿವಮೊಗ್ಗದಲ್ಲಿ ಪತ್ತೆಯಾಯ್ತು ವರ್ಷದ ಮೊದಲ ಕೊರೊನ ವೈರಸ್
coronavirus : ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಹಾವೇರಿ ಮೂಲದ ವೃದ್ದರೊಬ್ಬರು ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆಯಲು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರಿಗೆ ಕಫ ಹೆಚ್ಚಾಗಿತ್ತು. ಈ ಹಿನ್ನಲೆ ಅವರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಸೋಮವಾರ ವೃದ್ದನಿಗೆ ಕೊರೊನ ಸೋಕು ತಗುಲಿರುವುದು ದೃಡಪಟ್ಟಿದೆ.
ಮೆಗ್ಗಾನ್ ಆಸ್ಪತ್ರೆ ಯಲ್ಲಿ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕೊರೊನಾ ದೃಢಪಟ್ಟಿದೆ. ಈ ಹಿನ್ನಲೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಹಾವೇರಿ ಜಿಲ್ಲೆಯ ಡಿ ಹೆಚ್ ಒ ಅವರಿಗೆ ಮಾಹಿತಿ ನೀಡಿದ್ದಾರೆ.
