ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: : ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (SP) ಆಂಟನಿ ಜಾನ್ ಜೆ.ಕೆ. ಅವರು ನೂತನವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎಸ್. ಕೌಲಾಪೂರೆ ಅವರು ವರ್ಗಾವಣೆಗೊಂಡಿದ್ದು, ತೆರವಾದ ಹುದ್ದೆಗೆ ಆಂಟನಿ ಜಾನ್ ಅವರನ್ನು ನೇಮಕಗೊಳಿಸಿ ಪ್ರಭಾರ ವಹಿಸಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಕುರಿತು ಸಾರ್ವಜನಿಕರು ನೇರವಾಗಿ ತಮ್ಮ ಗಮನಕ್ಕೆ ತರಬಹುದು ಎಂದು ನೂತನ ಲೋಕಾಯುಕ್ತ ಎಸ್‌ಪಿ ತಿಳಿಸಿದ್ದಾರೆ. ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಅನಗತ್ಯ ವಿಳಂಬ ಧೋರಣೆ, ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ದುರುಪಯೋಗ ಅಥವಾ ಯಾವುದೇ ರೀತಿಯ ಅಕ್ರಮ ಕಂಡುಬಂದಲ್ಲಿ ಅಗತ್ಯ ದಾಖಲೆಗಳೊಂದಿಗೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲು ಕೋರಲಾಗಿದೆ. ಸಾರ್ವಜನಿಕರು ಯಾವುದೇ ದೂರು ಅಥವಾ ಮಾಹಿತಿಗಾಗಿ ಲೋಕಾಯುಕ್ತ ಎಸ್‌ಪಿ ಅವರ ಮೊಬೈಲ್ ಸಂಖ್ಯೆ: 93640-62525 ಅನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
