ಕಾಡುಹಂದಿ ಶಿಕಾರಿಗೆ ಇಟ್ಟಿದ್ದ ನಾಡಬಾಂಬ್ ಮನೆಯಲ್ಲಿಯೇ ಸ್ಫೋಟ! ವಿವರ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
Country Bomb Blast

Country Bomb Blast / ಮಲೆನಾಡು ಟುಡೆ ಸುದ್ದಿ / ಉತ್ತರ ಕನ್ನಡ / ಇಲ್ಲಿನ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆ ನಾಡ ಬಾಂಬ್ ಸ್ಫೋಟಗೊಂಡು ಮನೆ ಸಂಪೂರ್ಣ ಧ್ವಂಸಗೊಂಡ ಘಟನೆ ಸಂಭವಿಸಿದೆ. ಘಟನೆಯಿಂದ ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.

ಇಲ್ಲಿನ ನಿವಾಸಿ ವಾಸುದೇವ ರಾಯಪ್ಪ ಕೊರವರ ಎಂಬಾತನಿಗೆ ಸೇರಿದ ಮನೆಯಲ್ಲಿ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ಬಾಂಬ್‌ಗಳನ್ನು ಸಂಗ್ರಹಿಸಿಡಲಾಗಿತ್ತು. ಕಾಡು ಹಂದಿ ಬೇಟೆಗೆ ಬಳಸಲಾಗುತ್ತಿದ್ದ ನಾಡ ಬಾಂಬ್‌ಗಳನ್ನು ಪಾಳುಬಿದ್ದ ಮನೆಯಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ಇನ್ನೂ ಸ್ಫೋಟ ಸಂಭವಿಸಿದ ಬಳಿಕ ವಾಸುದೇವ ರಾಯಪ್ಪ ಕೊರವರ ಪರಾರಿಯಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು. ಇಂತಹ ಅಪಾಯಕಾರಿ ಸ್ಫೋಟಕಗಳನ್ನು ತಯಾರಿಸಿ ಸಂಗ್ರಹಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ, ಹಾನಿಗೊಳಗಾದ ಮನೆಗಳ ಮಾಲೀಕರಿಗೆ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಡಾಗ್ ಸ್ಟ್ರಾಡ್ ಹಾಗೂ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್.. ತಾಲೂಕು ದಂಡಾಧಿಕಾರಿ ಪಿರೋಜಷಾ ಸೋಮನಕಟ್ಟಿ, ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಖಂಡಿ, ವೃತ್ತ ನಿರೀಕ್ಷಕ ಜಯಪಾಲ ಪಾಟೀಲ ಹಾಗೂ ಎಐ ಕೃಷ್ಣಗೌಡ ಅರಕೇರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor