WILDLIFE

ಕಾಡು ಬೆಕ್ಕು ಬೇಟೆ, ಒಂಟಿ ಕೊಳವೆ ನಾಡ ಬಂದೂಕು ವಶಕ್ಕೆ! ಕೇಸ್​ ದಾಖಲು

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

jungle cat hunting case / ಮಲೆನಾಡು ಟುಡೆ ಸುದ್ದಿ / ಸೊರಬ / ಸೊರಬ ತಾಲ್ಲೂಕಿನ ಗ್ರಾಮ ಒಂದದರಲ್ಲಿ ಅಕ್ರಮವಾಗಿ ನಾಡ ಬಂದೂಕು ಬಳಸಿ ವನ್ಯಪ್ರಾಣಿ ಕಾಡುಬೆಕ್ಕೊಂದನ್ನ ಹತ್ಯೆ ಮಾಡಿದ್ದ ವ್ಯಕ್ತಿಯೊಬ್ಬನ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಅಧಿಕಾರಿಗಳು ಆರೋಪಿಯ ಮನೆ ಮೇಲೆ ದಾಳಿ ನಡೆಸಿ ಬಳಿಕ ಈ ಕೇಸ್ ದಾಖಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ತಮಗೆ ಬಂದ ವರ್ತಮಾನದ ಮೇರೆಗೆ ಅಧಿಕಾರಿಗಳು ಇಲ್ಲಿನ ನಿವಾಸಿಯೊಬ್ಬನ ಮನೆ ಮೇಲೆ ದಾಳಿ ನಡೆಸಿದ್ದರು. ಆನವಟ್ಟಿ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಜಾವೀದ್ ಭಾಷಾ ಅಂಗಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಆರೋಪಿಯ ಮನೆಯಲ್ಲಿ ಒಂಟಿ ನಳಿಕೆಯ ಕೋವಿ ಸಿಕ್ಕಿದೆ.

Whatsapp / https://chat.whatsapp.com/JrsZ8He4nN600n0r3tJItz

ಒಂಟಿ ಕೊಳವೆಯ ನಾಡ ಬಂದೂಕು, 12 ಸೀಸದ ಗುಂಡುಗಳು, 4 ತಾಮ್ರದ ಕೇಫ್, 1 ಚರ್ಮದ ಬ್ಯಾಗ್ ಹಾಗೂ 800 ಗ್ರಾಂ ಬೇಯಿಸಿದ ಕಾಡು ಬೆಕ್ಕಿನ ಮಾಂಸವನ್ನು (jungle cat hunting case) ದಾಳಿ ವೇಳೆ ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದ ಮೇಲೆ 15/06/2026 ರಂದು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ರ ಅಡಿ ಪ್ರಕರಣ ದಾಖಲಿಸಲಾಗಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ