Couple Assaulted Three Arrested in sagara 09
Sagara news / ಸಾಗರ: ಸಾಗರದಲ್ಲಿ ಅನ್ಯಕೋಮಿನ ಯುವಕ ಯುವತಿಯು ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ಅವರನ್ನು ಬೆದರಿಸಿದ ಘಟನೆ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂಬ ಮಾಹಿತಿಯಿದೆ.

ನಡೆದಿದ್ದೇನು?
ಜುಲೈ 7ರಂದು ನಡೆದ ಘಟನೆ ಇದಾಗಿದೆ. ಲಭ್ಯ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಯುವತಿ ಸಾಗರ ತಾಲ್ಲೂಕಿನ ಕಂಪನಿಯೊಂದರಲ್ಲಿ ಕೆಲಸಕ್ಕೆ ಹೋಗುವ ಸಲುವಾಗಿ ಪರಿಚಿತ ಯುವಕನ ಬೈಕ್ನಲ್ಲಿ ತೆರಳುತ್ತಿದ್ದಳು. ಇವರಿಬ್ಬರನ್ನು ಇಲ್ಲಿನ ರೈಲ್ವೆ ಗೇಟ್ ಬಳಿ ತಡೆದ ದುಷ್ಕರ್ಮಿಗಳು, ಬೆದರಿಕೆ ಹಾಕಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ್ದಾರೆ. ಮೇಲಾಗಿ ಯುವಕ ಯುವತಿಯನ್ನ ಅಪಹರಿಸಿ ಬೇರೆಡೆಗೆ ಕರೆದೊಯ್ದು ಬೆದರಿಕೆ ಹಾಕಿ ಹಲ್ಲೆ ಮಾಡಿದ ಆರೋಪವೂ ಕೇಳಿಬಂದಿದೆ. ಈ ನಡುವೆ ವಿಷಯ ತಿಳಿದು ಪೊಲೀಸರೇ ಸಂತ್ರಸ್ತರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸರು ಮೂವರನ್ನ ಅರೆಸ್ಟ್ ಮಾಡಿದ್ದಾರೆ. ಈ ನಡುವೆ ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಹಲ್ಲೆ ನಡೆಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾಗರ ಡಿವೈಎಸ್ಪಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

Couple Assaulted Three Arrested in sagara 09