ಅಡಕೆ ತೋಟದಲ್ಲಿ ಗಾಂಜಾ ಬೆಳೆದವನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

The court sentenced 10 years imprisonment to the person who grew ganja in the arecanut plantation

ಅಡಕೆ ತೋಟದಲ್ಲಿ ಗಾಂಜಾ ಬೆಳೆದವನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌
arecanut plantation

Shivamogga  Apr 4, 2024  ಅಡಿಕೆ ತೋಟದಲ್ಲಿ ಗಾಂಜಾ ಬೆಳದಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷ ಶಿಕ್ಷೆ ನೀಡಿದ ಘಟನೆಯೊಂದರ ಬಗ್ಗೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಗ್ಗೆ ವರದಿಯಾಗಿದೆ. ಚಿತ್ರದುರ್ಗದ ಚಿಕ್ಕಗೊಂಡನಹಳ್ಳಿಯಲ್ಲಿ   ನಿವಾಸಿಯೊಬ್ಬರಿಗೆ ಇಲ್ಲಿನಾ ಜಿಲ್ಲಾ ಕೋರ್ಟ್‌ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ. 

ಇಲ್ಲಿನ ನಿವಾಸಿ ಯರಿಸ್ವಾಮಿ ಎಂಬಾತ ತನ್ನ ತೋಟದಲ್ಲಿ ಗಾಂಜಾ ಬೆಳೆದಿದ್ದ. ದಾಳಿ ವೇಳೆ 30 ಕೆಜಿ 300 ಗ್ರಾಮ್‌  ಸೊಪ್ಪು ಪತ್ತೆಯಾಗಿತ್ತು.. ಈ ಸಂಬಂಧ ಪೊಲೀಸರು ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು.   ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ತನಿಖೆ ನಡೆದು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. 

ಸದ್ಯ  ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿದ್ದಾರೆ.