Life Imprisonment / ಮಲೆನಾಡು ಟುಡೆ ಸುದ್ದಿ / ಸೊರಬ / ಸೊರಬ ತಾಲೂಕಿನ ಸಮನವಳ್ಳಿ ಆನವಟ್ಟಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಜಗಳ ತೆಗೆದು ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ಶಿವಮೊಗ್ಗ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಶಿವಮೊಗ್ಗದ 5ನೇ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಆರ್. ಈ ತೀರ್ಪನ್ನು ನೀಡಿದ್ದು, ಜೀವಾವಧಿ ಶಿಕ್ಷೆಯ ಜೊತೆಜೊತೆಗೆ 50,000 ರೂಪಾಯಿಗಳ ದಂಡ ವಿಧಿಸಿದ್ದಾರೆ.
ಘಟನೆಯ ಹಿನ್ನೆಲೆ ಹೀಗಿದೆ
ದಿನಾಂಕ 25-08-2020 ರಂದು ನಡೆದಿದ್ದ ಘಟನೆ ಇದಾಗಿದೆ. ಸೊರಬ ತಾಲೂಕಿನ ಸಮನವಳ್ಳಿ ಆನವಟ್ಟಿ ಗ್ರಾಮದ ವಾಸಿ ರಾಜೇಶ್ವರಿ (35 ವರ್ಷ) ಎಂಬುವವರು ತಮ್ಮ ಕುಟುಂಬದೊಂದಿಗೆ ಮಾತನಾಡುತ್ತಾ ಮನೆಯ ಮುಂದೆ ಕುಳಿತಿದ್ದರು. ಈ ವೇಳೆ, ಅದೇ ಗ್ರಾಮದ ಮಂಜುನಾಥ (25 ವರ್ಷ) ಎಂಬಾತ ಅಲ್ಲಿಗೆ ಬಂದು ಜಾಗದ ವಿಚಾರಕ್ಕೆ ಕಿರಿಕ್ ತೆಗೆದಿದ್ದಾನೆ. ಅಲ್ಲದೆ ಕಂಪ್ಲೆಂಟ್ ಕೊಡುತ್ತೇನೆ ಎಂದಿದ್ದಕ್ಕೆ ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ ಎಂಬುದು ಪ್ರಕರಣದ ಸಾರಾಂಶ
ಈ ಘಟನೆಗೆ ಸಂಬಂಧಿಸಿದಂತೆ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಕಲಂ 504 ಹಾಗೂ 302 ಐಪಿಸಿ ಅಡಿಯಲ್ಲಿ ಕೇಸ್ ಆಗಿತ್ತು. ಅಂದಿನ ತನಿಖಾಧಿಕಾರಿ ಸೊರಬ ವೃತ್ತದ ಸಿಪಿಐ ಆರ್.ಡಿ. ಮರುಳಸಿದ್ದಪ್ಪ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಹಾಕಿದ್ದರು. ಶಿವಮೊಗ್ಗದ 5ನೇ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಇಲ್ಲಿವರೆಗೂ ವಿಚಾರಣೆ ನಡೆದಿತ್ತು. ಸರ್ಕಾರದ ಪರವಾಗಿ ಸರ್ಕಾರದ ಅಭಿಯೋಜಕರಾದ ಅಣ್ಣಪ್ಪ ನಾಯಕ ವಾದ ಮಾಡಿದ್ದರು. ಇದೀಗ ತೀರ್ಪು ಹೊರಬಿದ್ದಿದೆ..
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
