ಜಾತಿ ನಿಂದನೆ! ಮೂವರಿಗೆ ನಾಲ್ಕು ವರ್ಷ ಶಿಕ್ಷೆ! ಎಚ್ಚರಿಕೆ?

ajjimane ganesh

Court Sentences in  Caste Abuse case  ಶಿವಮೊಗ್ಗ, malenadu today news : August 24 2025, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣದಲ್ಲಿ ನಾಲ್ವರಿಗೆ ಶಿಕ್ಷೆಯಾಗಿದೆ. ಮೂವರು ಆರೋಪಿಗಳಿಗೆ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.  

Court Sentences in  Caste Abuse case  Bhadravathi court verdict case
Bhadravathi court verdict case

ದಿನಾಂಕ 11/08/2018 ರಂದು ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ  ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ  ಶ್ರೀಧರ, ಮೋಹನ್ ಮತ್ತು ಹರೀಶ್ ಹಾಗೂ ಮನು ಎಂಬ ಆರೋಪಿಗಳು  ಜಾತಿ ನಿಂದನೆ ಮಾಡಿದ್ದಲ್ಲದೆ, ಅವರ ಕೈ ಹಿಡಿದು ಎಳೆದಾಡಿ, ಬಟ್ಟೆಗಳನ್ನು ಹರಿದು ಹಲ್ಲೆ ನಡೆಸಿದ್ದರು. ಈ ಕುರಿತಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿ ಅಂದಿನ ತನಿಖಾಧಿಕಾರಿ ಡಿವೈಎಸ್‌ಪಿ ಓಂಕಾರ್ ನಾಯ್ಕ್ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ (charge sheet) ಸಲ್ಲಿಸಿದ್ದರು. 

- Advertisement -

ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..

ನಂತರ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ  ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್  ಪ್ರಕರಣದ ವಿಚಾರಣೆ ನಡೆಸಿದ್ದರು.  ಸರ್ಕಾರಿ ಅಭಿಯೋಜಕಿ ರತ್ನಮ್ಮ ಈ ಸಂಬಂಧ ವಾದ ಮಂಡಿಸಿದ್ದು, ಇದೀಗ ಪ್ರಕರಣದ ತೀರ್ಪು ಹೊರಬಿದ್ದಿದೆ. 

IPC ಕಲಂ 504, 448, 354, 427, 506 ರಡಿ 2 ವರ್ಷ ಕಠಿಣ ಸಜೆ ಮತ್ತು ₹5,000 ದಂಡ ವಿಧಿಸಲಾಗಿದೆ. ಅಲ್ಲದೆ, ಕಲಂ 323 ರಡಿ 1 ವರ್ಷ ಕಠಿಣ ಸಜೆ ಮತ್ತು ₹1,000 ದಂಡ, ಹಾಗೂ SC/ST ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ 4 ವರ್ಷ ಕಠಿಣ ಸಜೆ ಮತ್ತು ತಲಾ ₹70,000 ದಂಡ ವಿಧಿಸಿ ಆದೇಶಿಲಾಗಿದೆ. 

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್​ಗೆ ಜಾಯಿನ್ ಆಗಿ

Court Sentences in  Caste Abuse case 

car decor new

 

 

Share This Article
Leave a Comment

Leave a Reply

Your email address will not be published. Required fields are marked *