ಸಾಗರ: ಶುಕ್ರವಾರ ರಾತ್ರಿ ಇಲ್ಲಿನ ಎಲ್ಐಸಿ ಕಚೇರಿ ಬಳಿ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ತಾರಕಕ್ಕೇರಿದ್ದು, ಈ ವೇಳೆ ಯುವಕನೊಬ್ಬನ ಕೈಗೆ ಚಾಕುವಿನಿಂದ ಇರಿಯಲಾಗಿದೆ.
ಗಾಯಗೊಂಡ ಯುವಕನನ್ನು ಸುಪ್ರೀತ್ ಎಂದು ಗುರುತಿಸಲಾಗಿದೆ. ಈ ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.